ನ್ಯೂಸ್ ನಾಟೌಟ್: ದೆಹಲಿ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇತ್ತೀಚಿಗೆ ಅವರನ್ನು ಸಿಬಿಐ ಭ್ರಷ್ಟಾಚಾರದ ಆರೋಪದಡಿಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಆದರೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಅವರನ್ನು ಬಿಡುಗಡೆಗೊಳಿಸಿತ್ತು.
ಗಾಝಿಯಾಬಾದ್ ಮೂಲದ ಅಲೋಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಎಂದು ವರದಿ ತಿಳಿಸಿದೆ. ದೆಹಲಿ ಹತ್ತಿರದ ಸಾಹಿಬಾಬಾದ್ (Sahibabad) ರೈಲ್ವೇ ಹಳಿ ಮೇಲೆ ಅಲೋಕ್ ಕುಮಾರ್ ಮೃತದೇಹ ಪತ್ತೆಯಾಗಿದೆ. ಭ್ರಷ್ಟಾಚಾರದ ಪ್ರಕರಣದಲ್ಲಿ ತನ್ನ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಅಲೋಕ್ ಕುಮಾರ್ ಡೆಪ್ಯುಟೇಷನ್ ಮೇಲೆ ನವದೆಹಲಿಯ ಇ.ಡಿ ಕಚೇರಿಗೆ ವರ್ಗಾವಣೆಯಾಗಿದ್ದರು. ಅವರು ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
Click