ನ್ಯೂಸ್ ನಾಟೌಟ್: ಚಾರ್ಮಾಡಿ ಘಾಟ್ (Charmadi Ghat) ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದ್ದು ಇಂದು(ಆ.22) ಮತ್ತೆ ಗುಡ್ಡ (Land Slide) ಕುಸಿದಿದೆ.
ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿದೆ. ಮಳೆ ನೀರಿನ ಜೊತೆ ರಸ್ತೆಗೆ ಕಲ್ಲುಗಳು ತೇಲಿಕೊಂಡು ಬಂದಿವೆ. ಚಾರ್ಮಾಡಿ ಘಾಟಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು ರಸ್ತೆಯಲ್ಲಿ ಅಡಿಗಟ್ಟಲೇ ನೀರು ಹರಿಯುತ್ತಿದೆ. ವಾಹನ ಸಂಚಾರ ಎಂದಿನಂತೆ ಇದೆ, ಆದರೆ ಸವಾರರು ಮುನ್ನಚ್ಚರಿಕೆ ವಹಿಸಿ ಅತ್ಯಂತ ಅಗತ್ಯವಿದ್ದರೆ ಮಾತ್ರ ಆ ಕಡೆಯಿಂದ ಪ್ರಯಾಣಿಸಲು ತಿಳಿಸಲಾಗಿದೆ.
ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಚಾರ್ಮಾಡಿ ಘಾಟ್ ಸಂಪರ್ಕಿಸುತ್ತದೆ. ಬೆಂಗಳೂರಿನಿಂದ ದಕ್ಷಿಣ ಕನ್ನಡ, ಉಡುಪಿ ಭಾಗಗಳಿಗೆ ಸಂಪರ್ಕ ಕಲ್ಪಿಸುತ್ತದೆ.
Click