ನ್ಯೂಸ್ ನಾಟೌಟ್ : ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ, ವಿದ್ಯಾರ್ಥಿ ಕ್ಷೇಮಪಾಲನ ಸಂಘ ಮತ್ತು ಲೈಂಗಿಕ ದೌರ್ಜನ್ಯ ವಿರೋಧಿ ಕೋಶ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ.) ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ (ಆ.23) ನಡೆಯಿತು.
NMC ಪ್ರಾಂಶುಪಾಲರಾಗಿರುವ ಡಾ. ರುದ್ರ ಕುಮಾರ್ ಎಂ.ಎಂ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ,ವ್ಯಕ್ತಿತ್ವ ವಿಕಸನ ತರಬೇತುದಾರರಾಗಿರುವ ಡಾ. ಅನುರಾಧ ಕುರುಂಜಿ ಭಾಗವಹಿಸಿ ಮಾತನಾಡಿ, ಮಾದಕ ವ್ಯಸನಕ್ಕೆ ಬಲಿಯಾಗಲು ಇರುವ ಕಾರಣ ಹಾಗೂ ಅದರ ದುಷ್ಪರಿಣಾಮವನ್ನು ವಿವರಿಸಿದರು.
ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಧ್ಯಕ್ಷ ಲೋಕನಾಥ ಅಮೆಚೂರು, ಉಪಾಧ್ಯಕ್ಷ ವಿಶ್ವನಾಥ ಶೆಟ್ಟಿ , ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ಯೋಜನಾಧಿಕಾರಿ ಮಾಧವ ಗೌಡ, ಮೇಲ್ವಿಚಾರಕಿ ಜಯಶ್ರೀ , ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕರು ಹಾಗೂ ಉಪನ್ಯಾಸಕರಾದ ಡಾ. ಮಮತಾ ಕೆ, ಲೈಂಗಿಕ ದೌರ್ಜನ್ಯ ವಿರೋಧಿ ಕೋಶ ಸಂಯೋಜಕರು ಹಾಗೂ ಉಪನ್ಯಾಸಕರಾದ ಕೃಪಾ ಎ ಎನ್ ಉಪಸ್ಥಿತರಿದ್ದರು.