ನ್ಯೂಸ್ ನಾಟೌಟ್ : ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಇದೀಗ ಕಾಡಿನೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಕೊಳೆತ ಸ್ಥಿತಿಯಲ್ಲಿರುವ ಮೃತದೇಹ ಮರದಲ್ಲಿ ನೇತಾಡುತ್ತಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪುತ್ತೂರು ತಾಲೂಕಿನ ಈಶ್ವರಮಂಗಲದ ಮೈಂದಿನಡ್ಕ ಎಂಬಲ್ಲಿಂದ ಸೋಮವಾರದಿಂದ ನಾರಾಯಣ (55 ವರ್ಷ) ನಾಪತ್ತೆಯಾಗಿದ್ದರು. ಇವರಿಗಾಗಿ ತೀವ್ರ ಹುಡುಕಾಟ ನಡೆದಿತ್ತು. ಇದೀಗ ಮಾಪಳ ಎಂಬ ಜಾಗದಲ್ಲಿ ಮನೆಯಿಂದ ಸುಮಾರು ಕಾಲು ಕಿ.ಮೀ. ದೂರದ ಕಾಡಿನೊಳಗೆ ಮರದ ಮೇಲೆ ನೇತಾಡುತ್ತಿರುವ ಸ್ಥಿತಿಯಲ್ಲಿ ಬಾಡಿ ಪತ್ತೆಯಾಗಿದೆ. ಭಾಗಶಃ ಕೊಳೆತ ಸ್ಥಿತಿಯಲ್ಲಿ ನಾರಾಯಣ ಅವರ ಶವ ಸಿಕ್ಕಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಅನ್ನುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪ್ರಗತಿ ಆಂಬ್ಯುಲೆನ್ಸ್ ಚಾಲಕ ಅಚ್ಚು ಪ್ರಗತಿ ಅವರು ತೆರಳಿದ್ದಾರೆ. ಮೃತದೇಹವನ್ನು ಮರದಿಂದ ಕೆಳಗಿಳಿಸಿ ಆಸ್ಪತ್ರೆಗೆ ಸಾಗಿಸುವ ಕೆಲಸ ನಡೆಸಲಿದ್ದಾರೆ. ಇವರಿಗೆ ಶ್ರೀಮುತ್ತಪ್ಪನ್ ಆಂಬ್ಯುಲೆನ್ಸ್ ನ ಅಭಿಲಾಷ್ ಕೂಡ ಸಾಥ್ ನೀಡಿದ್ದಾರೆ.