ನ್ಯೂಸ್ ನಾಟೌಟ್: ಬಾಂಗ್ಲಾದೇಶದ (Bangladesh) ರಾಜಧಾನಿ ಢಾಕಾದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದೆ. ಸೆಕ್ರೆಟರಿಯೇಟ್ ಬಳಿ ಭಾನುವಾರ ರಾತ್ರಿ ವಿದ್ಯಾರ್ಥಿಗಳು ಮತ್ತು ಅನ್ಸಾರ್ ಸದಸ್ಯರ ನಡುವೆ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿವೆ.
ರಾತ್ರಿ 9 ಗಂಟೆಯ ನಂತರ ಘರ್ಷಣೆ ಆರಂಭವಾಗಿದ್ದು, ಎರಡೂ ಕಡೆಯ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅನ್ಸರ್ ಸದಸ್ಯರು ನಿರಂಕುಶ ಪ್ರಭುತ್ವದ ಏಜೆಂಟ್ಗಳು ಎಂದು ವಿದ್ಯಾರ್ಥಿಗಳು ಕರೆದಿದ್ದಾರೆ.
ಬಾಂಗ್ಲಾದೇಶದಲ್ಲಿ ಆಂತರಿಕ ಭದ್ರತೆ ನೀಡುತ್ತಿರುವ ಅನ್ಸಾರ್ ಸದಸ್ಯರು (Ansar Members) ನಮ್ಮ ಉದ್ಯೋಗವನ್ನು ರಾಷ್ಟ್ರೀಕರಣಗೊಳಿಸಬೇಕೆಂದು ಕೆಲ ತಿಂಗಳಿನಿಂದ ಬೇಡಿಕೆ ಇಟ್ಟಿದ್ದಾರೆ. ಈ ಬೇಡಿಕೆ ಸಂಬಂಧ ಸಭೆ ನಡೆಯುತ್ತಿರುವಾಗ ಹಿಂಸಾಚಾರ ನಡೆದಿದೆ.
Click