ನ್ಯೂಸ್ ನಾಟೌಟ್ : ಮಲಯಾಳಂ ಸಿನಿಮಾ ರಂಗದಲ್ಲಿ ಸಂಚಲನ ಸೃಷ್ಟಿ ಮಾಡಿರೋ ಹೇಮಾ ವರದಿ (Hema Committee), ಇದೀಗ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ತಮ್ಮ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಕುರಿತಂತೆ ಬಹಿರಂಗವಾಗಿ ನಟಿಯರು ಮಾತಾಡುತ್ತಿದ್ದಾರೆ. ಜೊತೆಗೆ ದೂರುಗಳು ದಾಖಲಾಗುತ್ತಿವೆ. ಈವರೆಗೂ ಪ್ರಮುಖ ನಟರ ವಿರುದ್ಧ ಪೊಲೀಸರು 17 ದೂರುಗಳನ್ನು ದಾಖಲಿಸಿಕೊಂಡಿದ್ದಾರೆ.
ವರದಿಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಪ್ರತಿಭಟನೆಗಳು ಕೂಡ ನಡೆದಿವೆ. ಈ ನಡುವೆ ನಟಿಯರು ದೂರುಗಳನ್ನು ದಾಖಲಿಸುತ್ತಿದ್ದಾರೆ. ಮಲಯಾಳಂ ಸಿನಿಮಾ ರಂಗದಲ್ಲಿ ಸಹ ಕಲಾವಿದೆಯಾಗಿ ಗುರುತಿಸಿಕೊಂಡಿರೋ ನಟಿ ಸೋನಿಯಾ ಮಲಹಾರ್ ಸೇರಿದಂತೆ ಅನೇಕ ನಟಿಯರು ಮುಂದೆ ಬಂದು, ದೂರುಗಳನ್ನು ದಾಖಲಿಸುತ್ತಿದ್ದಾರೆ. ಇನ್ನೂ ಹಲವರು ದೂರು ನೀಡಲು ಚಿಂತನೆ ಕೂಡ ನಡೆಸಿದ್ದಾರಂತೆ. ಹಾಗಾಗಿ ನಟಿಯರು ಒತ್ತಡದಲ್ಲಿದ್ದಾರೆ ಅನ್ನುವ ಮಾಹಿತಿಯೂ ಇದೆ.
ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿರಾಜ್ , ಹೇಮಾ ವರದಿಯಲ್ಲಿನ ಹೆಸರುಗಳನ್ನು ಸರ್ಕಾರವೇ ಬಹಿರಂಗ ಪಡಿಸಬೇಕು. ಚಿತ್ರೀಕರಣದ ಸ್ಥಳದಲ್ಲಿನ ಸುರಕ್ಷತೆಯ ಬಗ್ಗೆ ಗಮನ ಹರಿಸಬೇಕು. ಏಕರೂಪದ ಮಾರ್ಗಸೂಚಿಯನ್ನು ತಯಾರಿಸಬೇಕು. ತಪ್ಪು ಯಾರೇ ಮಾಡಿದ್ದರೂ ಅವರ ಮೇಲೆ ತನಿಖೆ ಆಗಿ ಶಿಕ್ಷೆಯಾಗಬೇಕು ಎಂದಿದ್ದಾರೆ.