ನ್ಯೂಸ್ ನಾಟೌಟ್: ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಎರಡು ದಿನಗಳ ಹಿಂದೆ ವಶಕ್ಕೆ ಪಡೆದುಕೊಂಡ ಇಬ್ಬರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು ಆ.28ರಂದು ಬಂಧಿಸಿದ್ದಾರೆ. ಅವರನ್ನು ಕೂಡ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದು ಕೊಳ್ಳಲಾಗಿದೆ.
ಬಂಧಿತ ಆರೋಪಿಗಳ ಪೈಕಿ ಅಭಯ್ನನ್ನು ಪೊಲೀಸರು ಈಗಾಗಲೇ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದರು. ಉಳಿದ ಇಬ್ಬರು ಆರೋಪಿಗಳಾದ ಅಲ್ತಾಫ್ ಹಾಗೂ ರಿಚರ್ಡ್ ಕ್ಸೇವಿಯರ್ನ ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ಅವಧಿ ಆ.27ಕ್ಕೆ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಕಾರ್ಕಳ ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು.
ಇವರಿಬ್ಬರನ್ನು ಹೆಚ್ಚಿನ ತನಿಖೆ ಒಳಪಡಿಸಬೇಕಾಗಿರುವುದರಿಂದ ಮತ್ತೆ ಪೊಲೀಸ್ ವಶಕ್ಕೆ ನೀಡುವಂತೆ ಪೊಲೀಸರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಕೋರ್ಟ್ ಈ ಇಬ್ಬರು ಆರೋಪಿಗಳನ್ನು ಮತ್ತೆ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.
Click