ಕೊಡಗುಬೆಂಗಳೂರುರಾಜ್ಯ

ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ ಸಾಧ್ಯತೆ, ಹವಮಾನ ಇಲಾಖೆ ಹೇಳಿದ್ದೇನು..?

ನ್ಯೂಸ್ ನಾಟೌಟ್: ಕರ್ನಾಟಕ ಕರಾವಳಿಯಲ್ಲಿ ಪ್ರತ್ಯೇಕವಾಗಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗಲಿದೆ. ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯಾಗಲಿದೆ, ಕೆಲವೆಡೆ ಚದುರಿದಂತೆ ಅತಿ ಲಘುವಾಗಿ ಮಳೆ ಸುರಿಯಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲೂ ವರುಣ ಅಬ್ಬರಿಸಲಿದ್ದಾನೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಭಾರೀ ಮಳೆಯಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಗದಗ , ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಜಿಲ್ಲೆಯಾದ್ಯಂತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 20 ಡಿ.ಸೆ ಇರಲಿದೆ.

Related posts

ಬೆಂಗಳೂರಿನಿಂದ ಮಂಗಳೂರು ಸಂಚಾರಕ್ಕೆ ಆಧಾರವಾಗಿದ್ದ ಶಿರಾಡಿ ಘಾಟ್‌ ಬಂದ್‌..! ಗುಡ್ಡ ಕುಸಿತ, ಸುಮಾರು 10 ಕಿಮಿ ಟ್ರಾಫಿಕ್ ಜಾಮ್..!

ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಎರಗಿದ ಕಾಮುಕ..! ಇಲ್ಲಿದೆ ಸಿಸಿಟಿವಿ ದೃಶ್ಯ..!

25 ಐಪಿಎಸ್ ಅಧಿಕಾರಿಗಳ ವರ್ಗಾವಣೆಯ ಬೆನ್ನಲ್ಲೇ 21 ಐಎಎಸ್ ಅಧಿಕಾರಿಗಳೂ ಟ್ರಾನ್ಸ್ ಫರ್..! ಏನಿದು ಮೇಜರ್ ಸರ್ಜರಿ..?