ನ್ಯೂಸ್ ನಾಟೌಟ್: ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಾಸೋತ್ಸವದ ಸಮಾರೋಪ ಸಮಾರಂಭದಲ್ಲಿ ಸಂಸ್ಕೃತ ಭಾಷೆಯಲ್ಲಿ ಮಾತನಾಡಿದ ಪರ್ಯಾಯ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಭಾಷಣ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮತ್ತು ವಿರೋಧಕ್ಕೆ ಕಾರಣವಾಗಿದೆ.
ಸಂಸ್ಕೃತ ಎಲ್ಲ ಭಾಷೆಗಳ ತಾಯಿ, ಉಳಿದೆಲ್ಲಾ ಭಾಷೆಗಳು ಪ್ರಾದೇಶಿಕ ಭಾಷೆಗಳು. ಆದರೇ ಸಂಸ್ಕೃತ ವಿಶ್ವಭಾಷೆಯೂ ಹೌದು, ದೇವಭಾಷೆಯೂ ಹೌದು, ಪರಲೋಕದ ಭಾಷೆಯೂ ಹೌದು. ಸ್ವರ್ಗ ಲೋಕಕ್ಕೆ ಹೋಗಬೇಕಾದರೆ ಸಂಸ್ಕೃತ ಕಲಿಯಬೇಕು. ಸಂಸ್ಕೃತ ಪವಿತ್ರ, ಶ್ರೇಷ್ಠ, ಪಾವನ ವಿಶ್ವಭಾಷೆ. ದೇವರ ಎಲ್ಲಾ ಶ್ಲೋಕಗಳು ಪೂಜೆಗಳು ಸಂಸ್ಕೃತ ಭಾಷೆಯಲ್ಲಿ ನಡೆಯುತ್ತದೆ ಎಂದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ, ಸ್ವಾಮೀಜಿ ಭಾನುವಾರ ನೀಡಿದ ಈ ಹೇಳಿಕೆಗಳಿಗೆ ಸೋಶಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗುತ್ತಿದೆ.
ಸರ್ವ ಭಾಷೆಗಳಿಗೆ ಮೂಲ ಸಂಸ್ಕೃತ. ಎಲ್ಲ ಭಾಷೆಗಳ ತಾಯಿ ಸಂಸ್ಕೃತ. ತುಳು ಕನ್ನಡ ಮಲಯಾಳಂ ಹಿಂದಿ, ತಮಿಳು, ತೆಲುಗು ಭಾಷೆಗಳು ಹುಟ್ಟಿಕೊಂಡಿರುವುದೇ ಸಂಸ್ಕೃತದಿಂದ ಕೇವಲ ಭಾರತೀಯ ಭಾಷೆಗಳಿಗೆ ಮಾತ್ರ ಸಂಸ್ಕೃತ ಮೂಲವಲ್ಲ. ಆಂಗ್ಲ ಭಾಷೆಗಳಿಗೂ ಮೂಲ ಸಂಸ್ಕೃತವೇ. ಪಿತಾದಿಂದ ಫಾದರ್, ಮದರ್ ಹುಟ್ಟಿಕೊಂಡಿದೆ. ಸಮಗ್ರವು ಸಂಸ್ಕೃತ ಭಾಷೆಯಿಂದ ಹುಟ್ಟಿಕೊಂಡಿದೆ. ಸಂಸ್ಕೃತ ಭಾಷೆಯನ್ನು ಹೊರತುಪಡಿಸಿ ಇತರ ಭಾಷೆಗಳು ಪ್ರಾದೇಶಿಕ ಭಾಷೆಗಳಾಗಿವೆ.
ಕರ್ನಾಟಕದಲ್ಲಿ ಕನ್ನಡ, ದೇಶದಲ್ಲಿ ಹಿಂದಿ, ವಿದೇಶದಲ್ಲಿ ಇಂಗ್ಲಿಷ್ ಅಂತಾರಾಷ್ಟ್ರೀಯ ಭಾಷೆ. ಸಂಸ್ಕೃತ ಭಾಷಾ ಅಂತರ್ಲೋಕೀಯ ಭಾಷೆ. ದೇವಲೋಕದಲ್ಲಿ ವ್ಯವಹರಿಸುವುದು ಸಂಸ್ಕೃತ ಭಾಷೆಯಲ್ಲಿ ಸಂಸ್ಕೃತ ದೇವ ಭಾಷೆ. ಸಂಸ್ಕೃತ ಭಾಷೆ ತಿಳಿಯದಿದ್ದರೆ ದೇವಲೋಕಕ್ಕೆ ವೀಸಾ ಸಿಗುವುದಿಲ್ಲ. ಸ್ವರ್ಗ ಲೋಕಕ್ಕೆ ಹೋಗಬೇಕಾದರೆ ಸಂಸ್ಕೃತ ಕಲಿಯಬೇಕು. ಸಂಸ್ಕೃತ ಪವಿತ್ರ ಶ್ರೇಷ್ಠ ಪಾವನ ವಿಶ್ವಭಾಷೆ ಎಂದ ಸ್ವಾಮೀಜಿಯ ಹೇಳಿಕೆಗಳಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.
Click