ನ್ಯೂಸ್ ನಾಟೌಟ್ : ಶಿಕ್ಷಕರ ದಿನಾಚರಣೆ ಪ್ರಯುಕ್ತ ರಾಜ್ಯ ಸರ್ಕಾರ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಇಂದು ಪ್ರದಾನ ಮಾಡಿದೆ. ಇದರಲ್ಲಿ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಾಂಶುಪಾಲರಾದ ರಾಮಕೃಷ್ಣ ಜಿಬಿ ಎಂಬವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಆದರೆ, ಹಿಜಾಬ್ ವಿವಾದದ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಗೇಟ್ನಲ್ಲಿಯೇ ತಡೆದಿದ್ದು ಇವರೇ ಎನ್ನುವುದು ಗೊತ್ತಾಗುತ್ತಿದ್ದಂತೆ ರಾಜ್ಯ ಸರ್ಕಾರ ಇವರಿಗೆ ಘೋಷಣೆ ಮಾಡಿದ್ದ ಪ್ರಶಸ್ತಿಯನ್ನು ತಡೆಹಿಡಿದಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇನ್ನು ಈ ಬಗ್ಗೆ ಖುದ್ದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದು, ಈ ಹಿಂದಿನ ಸರ್ಕಾರ ಆದೇಶ ಮಾಡಿದಾಗ ಪ್ರಿನ್ಸಿಪಾಲ್ ವರ್ತನೆ ಸರಿಯಿರಲಿಲ್ಲ. ಹೀಗಾಗಿ ಪ್ರಶಸ್ತಿ ತಡೆಹಿಡಿಯಲಾಗಿದೆ. ಪ್ರಶಸ್ತಿ ಕ್ಯಾನ್ಸಲ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಈ ಹಿಂದಿನ ಸರ್ಕಾರ ಆದೇಶ ಮಾಡಿದಾಗ ಪ್ರಿನ್ಸಿಪಾಲ್ ವರ್ತನೆ ಸರಿಯಿರಲಿಲ್ಲ. ಹೀಗಾಗಿ ಪ್ರಶಸ್ತಿ ತಡೆಹಿಡಿಯಲಾಗಿದೆ, ಪ್ರಶಸ್ತಿ ರದ್ದು ಮಾಡಿಲ್ಲ. ವಿದ್ಯಾರ್ಥಿಗಳ ಜೊತೆ ಪ್ರಿನ್ಸಿಪಾಲ್ ರಾಮಕೃಷ್ಣ ವರ್ತನೆ ಸರಿಯಿರಲಿಲ್ಲ. ಈ ಬಗ್ಗೆ ಮತ್ತೆ ಪರಿಶೀಲನೆ ಮಾಡಿ ವರದಿ ನೀಡುತ್ತಾರೆ.