ನ್ಯೂಸ್ ನಾಟೌಟ್: ಶಾಲೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 17 ಮಕ್ಕಳು ಸಾವನ್ನಪ್ಪಿ, 70 ಮಂದಿ ಕಾಣೆಯಾಗಿದ ಘಟನೆ ಕೀನ್ಯಾದಲ್ಲಿ ನಡೆದಿದೆ.
ಕೀನ್ಯಾದ ಪ್ರಾಥಮಿಕ ವಸತಿ ಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೈರಿ ಕೌಂಟಿಯಲ್ಲಿರುವ (Nyeri county) ಹಿಲ್ ಸೈಡ್ ಎಂಡರಾಶಾ (Endarasha Academy) ಅಕಾಡೆಮಿಯಲ್ಲಿ ಮಧ್ಯರಾತ್ರಿ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಆ ಸಮಯದಲ್ಲಿ ಕೊಠಡಿಯಲ್ಲಿ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಲಗಿದ್ದರು ಎಂದು ತಿಳಿದು ಬಂದಿದೆ. ಅದರಲ್ಲಿ 17 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 70 ಮಂದಿ ಸುಳಿವು ದೊರೆತಿಲ್ಲ ಎಂದು ಹೇಳಲಾಗಿದೆ.
ರಾಷ್ಟ್ರೀಯ ಪೊಲೀಸ್ ವಕ್ತಾರ ರೆಸಿಲಿಯಾ ( Resila) ಮಾತನಾಡಿ, ಈಗಾಗಲೇ 17 ಮೃತದೇಹಗಳು ಪತ್ತೆಯಾಗಿದ್ದು, ಗುರುತಿಸಲಾಗದಷ್ಟು ಸುಟ್ಟು ಹೋಗಿವೆ. ಇನ್ನೂ ಕಾಣೆಯಾದವರನ್ನು ಪತ್ತೆಹಚ್ಚುವಂತೆ ಕ್ರಮ ಕೈಗೊಳ್ಳಲಾಗಿದೆ. ಡಿಎನ್ಎ ಪರೀಕ್ಷೆ ನಡೆಸಿ ಮೃತರ ಗುರುತು ಪತ್ತೆಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Click