ನ್ಯೂಸ್ ನಾಟೌಟ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ್ದ ಶಂಕಿತ ಉಗ್ರರು ಅಯೋಧ್ಯೆಯಲ್ಲಿ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆ ದಿನವೇ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಘಟಕದ ಕಚೇರಿ ಸ್ಫೋಟಕ್ಕೆ ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಇದನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಹೇಳಿದೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಮುಸ್ಸಾವೀರ್ ಹುಸೇನ್ ಶಾಜೀಬ್, ಅಬ್ದುಲ್ ಮಥೀನ್ ಅಹ್ಮದ್ ತಾಹಾ, ಮಾಜ್ ಮುನೀರ್ ಅಹ್ಮದ್ ಮತ್ತು ಮುಝಮಿಲ್ ಷರೀಫ್ ಎಂಬ ಆರೋಪಿಗಳ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಎನ್ಐಎ ಈ ವಿಷಯವನ್ನು ಉಲ್ಲೇಖಿಸಿದೆ.
‘ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆಯಾದ 2024ರ ಜನವರಿ 22ರಂದೇ ಕಚ್ಚಾ ಬಾಂಬ್ ಬಳಸಿ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಘಟಕದ ಕಚೇರಿ ಸ್ಫೋಟಿಸಲು ಆರೋಪಿಗಳು ನಡೆಸಿದ್ದ ಯತ್ನ ವಿಫಲವಾಗಿತ್ತು. ಆ ಬಳಿಕ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಯೋಜನೆ ರೂಪಿಸಿದ್ದರು’ ಎಂದು ಎನ್ಐಎ, ನ್ಯಾಯಾಲಯಕ್ಕೆ ತಿಳಿಸಿದೆ.
ಭಾರತೀಯ ದಂಡ ಸಂಹಿತೆ, ಕಾನೂನುಬಾಹಿರ ಚಟುವಟಿಕೆ(ತಡೆ) ಕಾಯ್ದೆ, ಸಾರ್ವಜನಿಕ ಆಸ್ತಿ ಹಾನಿ ತಡೆ (ಪಿಡಿಎಲ್ಪಿ) ಕಾಯ್ದೆ, ಸ್ಫೋಟಕ ವಸ್ತುಗಳ ನಿಯಂತ್ರಣ ಕಾಯ್ದೆಗಳ ಅಡಿಯಲ್ಲಿ ಎಲ್ಲ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಎನ್ಐಎ ಹೇಳಿದೆ.
Click