ನ್ಯೂಸ್ ನಾಟೌಟ್: ದರ್ಶನ್ ವಿರುದ್ಧ ನೂರಾರು ಸಾಕ್ಷಿಗಳು ಪೊಲೀಸರಿಗೆ ಸಿಕ್ಕಿವೆ. ಚಾರ್ಜ್ಶೀಟ್ನಲ್ಲಿನ ವಿವರಗಳು ನಿಜಕ್ಕೂ ಶಾಕಿಂಗ್ ಆಗಿವೆ. ಬೆಂಗಳೂರಿನಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಆಗುತ್ತಿದ್ದಂತೆಯೇ ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ಕುಟುಂಬದವರ ತುರ್ತು ಭೇಟಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮುಂದಿನ ಕಾನೂನು ಪ್ರಕ್ರಿಯೆಗಳ ಬಗ್ಗೆ ಫ್ಯಾಮಿಲಿ ಜೊತೆ ಮಾತನಾಡಲು ಕರೆದಿರಬಹುದು ಎನ್ನಲಾಗಿದೆ. ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ ಕುಟುಂಬದವರಿಗೆ ದೂರವಾಣಿ ಕರೆ ಮಾಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಜೊತೆ ಅವರು 5 ನಿಮಿಷಗಳ ಕಾಲ ಮಾತನಾಡಿದ್ದಾರೆ. ಮುಂದಿನ ಕಾನೂನು ಹೋರಾಟದ ಬಗ್ಗೆಯೇ ಪತ್ನಿ ಜೊತೆ ಅವರು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಗಿದಿದೆ. 3991 ಪುಟಗಳು ಇರುವ ಜಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಆರೋಪಗಳು ಗಂಭೀರ ಆಗಿರುವುದರಿಂದ ದರ್ಶನ್ಗೆ ಜಾಮೀನು ಸಿಗುವುದು ಕಷ್ಟ ಇದೆ. ಮುಂದಿನ ಕಾನೂನು ಹೋರಾಟದ ಬಗ್ಗೆ ಕೇವಲ 5 ನಿಮಿಷ ಫೋನ್ ಕಾಲ್ನಲ್ಲಿ ಮಾತನಾಡಲು ದರ್ಶನ್ಗೆ ಸಾಧ್ಯವಾಗಿಲ್ಲ. ಆದ್ದರಿಂದ ಪತ್ನಿ ಮತ್ತು ತಾಯಿ ಜೊತೆ ನೇರವಾಗಿ ಮಾತನಾಡಲು ಅವರು ತೀರ್ಮಾನಿಸಿದ್ದಾರೆ.
ನಾಳೆಯೇ (ಸೆಪ್ಟೆಂಬರ್ 11) ಜೈಲಿಗೆ ಬರುವಂತೆ ಪತ್ನಿಗೆ ದರ್ಶನ್ ತಿಳಿಸಿದ್ದಾರೆ ಎನ್ನಲಾಗಿದೆ. ಪತ್ನಿ ವಿಜಯಲಕ್ಷ್ಮಿ ಮತ್ತು ತಾಯಿ ಮೀನಾ ಕೂಡ ಬರುವುದಾಗಿ ಮಾಹಿತಿ ನೀಡಿದ್ದಾರೆ.
Click