ನ್ಯೂಸ್ ನಾಟೌಟ್: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಕಳೆದ ರಾತ್ರಿ ಗಣಪತಿ ಮೂರ್ತಿ ವಿಸರ್ಜನೆ ವೇಳೆ ಹಿಂದೂ ಮತ್ತು ಮುಸ್ಲಿಂ ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಕೆಲ ಮುಸ್ಲಿಂ ವ್ಯಕ್ತಿಗಳು ಗಣಪತಿ ಮೂರ್ತಿ ಮೇಲೆ ಕಲ್ಲು ಹಾಗೂ ಚಪ್ಪಲಿ ತೂರಿದ್ದಾರೆ ಎನ್ನಲಾಗಿತ್ತು. ಇದೇ ವೇಳೆ ಕೆಲ ಅಂಗಡಿಗಳಿಗೂ ಬೆಂಕಿ ಹಚ್ಚಿದ್ದು, ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಈ ವೇಳೆ ಲಾಠಿ ಚಾರ್ಜ್ ಮಾಡಿದ್ದರು.
ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಬಂದ್ ಮಾಡುವಂತೆ ಆದೇಶ ನೀಡಲಾಗಿದೆ. ನಾಳೆ(ಸೆ.13) ರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟ ನಿಷೇದ ಮಾಡಿ, ಬಾರ್ ಆ್ಯಂಡ್ ರೆಸ್ಟೋರೆಂಟ್ ಬಂದ್ ಮಾಡುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಆದೇಶ ಹೊರಡಿಸಿದ್ದಾರೆ.
ಮುಂಜಾಗೃತಾ ಕ್ರಮವಾಗಿ, ನಾಳೆ ನಾಗಮಂಗಲ ಪಟ್ಟಣ ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ನಾಗಮಂಗಲ ಪಟ್ಟಣದಲ್ಲಿ ನಿಷೇಧಾಜ್ಞೆ ಹೇರಲಾಗಿದ್ದು, ಆದರೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ.
Click