ನ್ಯೂಸ್ ನಾಟೌಟ್: ‘ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿದ್ಯಾರ್ಥಿ ಸಂಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯ ತರಬೇತಿಯಾಗಿ ಬದಲಾಗಲಿ. ಮುಂದಿನ ದಿನಗಳಲ್ಲಿ ಶಾಸಕಾಂಗದ ಚುಕ್ಕಾಣಿಯನ್ನು ಹಿಡಿಯಲು ಪ್ರೇರಣೆಯಾಗಲಿ, ಜೊತೆಗೆ ವಿದ್ಯಾರ್ಥಿಗಳು ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಿ’ ಎಂದು ಜಾನಪದ ಲೇಖಕರು ಹಾಗೂ ಸಂಶೋಧಕರಾದ ಡಾ ಸುಂದರ ಕೇನಾಜೆ ಹೇಳಿದರು. ಇವರು ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸೆ. 12ರಂದು ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಸಭೆಯಲ್ಲಿ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮಾತನಾಡಿ, ‘ಕಾಲೇಜಿನ ಸಮಗ್ರ ಅಭಿವೃದ್ಧಿಯನ್ನು ಬೆಳೆಸುವಲ್ಲಿ ವಿದ್ಯಾರ್ಥಿ ಸಂಘ ಬಹಳ ಮುಖ್ಯ ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಲು ಸಹಕರಿಸುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಟಿ ವಿಶ್ವನಾಥ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಆಂತರಿಕ ಗುಣಮಟ್ಟ ಖಾತರಿ ಕೋಶ ಸಂಯೋಜಕಿ ಡಾ. ಮಮತಾ ಕೆ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಚಿನ್ನಪ್ಪ ಗೌಡ, ವಿದ್ಯಾರ್ಥಿ ಸಂಘದ ನಾಯಕ ಆದಿತ್ಯ ಡಿ.ಕೆ, ಉಪನಾಯಕಿ ಗಾನ ಬಿಡಿ, ಕಾರ್ಯದರ್ಶಿ ಸೂರ್ಯದರ್ಶನ್ ಪಿ ಎ, ಜೊತೆ ಕಾರ್ಯದರ್ಶಿ ಉಜಾನ ಕೆ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ದಕ್ಷಯ್ ಡಿ ಎಸ್ ಹಾಗೂ ಅಂಬಿಕಾ ಎಂ ಹಾಗೂ ಕ್ರೀಡಾ ಕಾರ್ಯದರ್ಶಿಗಳಾದ ಶಶಾಂಕ್ ಪಿ ವಿ ಹಾಗೂ ತೃಪ್ತಿ ಪಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ವಿದ್ಯಾರ್ಥಿ ಸಂಘದ ಎಲ್ಲಾ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಬಳಿಕ ಅರ್ಹ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಶ್ರೀಲಯ ಪ್ರಾರ್ಥಿಸಿದರು, ಆದಿತ್ಯ ಡಿ ಕೆ ಸ್ವಾಗತಿಸಿದರು. ಅನ್ವಯ ಅಂತಿಮ ಬಿ.ಕಾಂ ಹಾಗೂ ಅಕ್ಷತಾ ಸಿ ದ್ವಿತೀಯ ಬಿ.ಎಸ್ಸಿ ಕಾರ್ಯಕ್ರಮ ನಿರೂಪಿಸಿದರು, ಸೂರ್ಯದರ್ಶನ್ ಪಿ ಎ ವಂದಿಸಿದರು.