ನ್ಯೂಸ್ ನಾಟೌಟ್: ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆ ನಾಗಮಂಗಲ ಗಲಭೆ ಪ್ರಕರಣದ ಬಂಧಿತ 52 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಸೆ.11 ರಂದು ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಬುಧವಾರ(ಸೆ.12) ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆಗೆ ಕೊಂಡೊಯ್ಯಲಾಗಿತ್ತು. ಈ ವೇಳೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದರು. ಎರಡು ಗುಂಪುಗಳ ನಡುವಿನ ಘರ್ಷಣೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ತಡರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿ ಪರಿಸ್ಥಿತಿ ಹತೋಟಿಗೆ ತಂದರು. ಪ್ರಕರಣ ಸಂಬಂಧ ಇದುವರೆಗೆ 53 ಜನರನ್ನು ಬಂಧಿಸಲಾಗಿತ್ತು. ಗಲಭೆ ಸಂಬಂಧ 150 ಜನರ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿತ್ತು.
ಬಂಧಿಸಲಾಗಿದ್ದ 52 ಆರೋಪಿಗಳನ್ನು ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಬಳಿಕ ನ್ಯಾಯಾಧೀಶರ ಮುಂದೆ ಬಂಧಿತರನ್ನು ಪೊಲೀಸರು ಹಾಜರುಪಡಿಸಿದ್ದರು. ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಹಿರಿಯ ಸಿವಿಲ್ ನ್ಯಾಯಾಧೀಶರು ಆದೇಶಿಸಿದ್ದಾರೆ.
52 ಆರೋಪಿಗಳ ಪೈಕಿ, 23 ಹಿಂದೂ ಹಾಗೂ 39 ಮುಸ್ಲಿಮರಿದ್ದಾರೆ. ಸದ್ಯ ಆರೋಪಿಗಳನ್ನು ನಾಗಮಂಗಲದಿಂದ ಮಂಡ್ಯ ಜೈಲಿಗೆ ಶಿಫ್ಟ್ ಮಾಡಲಾಗಿದೆ.
Click