ನ್ಯೂಸ್ ನಾಟೌಟ್ : ಚಾಲಕನ ನಿಯಂತ್ರಣ ತಪ್ಪಿದ ಟೆಂಪೊ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿಕೊಂಡಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯ ಚಿತ್ರಾ ಸ್ಟುಡಿಯೋದ ಮಾಲೀಕ ಮತ್ತು ಸುಂಟಿಕೊಪ್ಪದ ಎಂ.ಬಿ.ವಿನ್ಸೆಂಟ್ ಮನೆಯ ಮುಂಭಾಗದಲ್ಲಿ ಮಗುಚಿದ ಪರಿಣಾಮ ಬಾರಿ ಅನಾಹುತ ತಪ್ಪಿದಂತಾಗಿದೆ. ಕುಶಾಲನಗರ ಕಡೆಯಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ವಿನ್ಸೆಂಟ್ ಅವರ ಮನೆಯ ಮುಂಭಾಗ ಮತ್ತೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ವಾಹನದಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.