ನ್ಯೂಸ್ ನಾಟೌಟ್: ಸತ್ಯದ ಪರವಾಗಿ ನೇರ ವರದಿಯನ್ನು ಮಾಡುವ ಪತ್ರಕರ್ತರಿಗೆ ಇತ್ತೀಚಿನ ದಿನಗಳಲ್ಲಿ ಬೆದರಿಕೆ ಕರೆ, ಹಲ್ಲೆಯಂತಹ ಪ್ರಕರಣಗಳು ಹೆಚ್ಚುತ್ತಿದೆ. ಇದನ್ನು ನಿಯಂತ್ರಣಕ್ಕೆ ತರಬೇಕು, ಪತ್ರಕರ್ತರು ನಿರ್ಬೀತಿಯಿಂದ ವರದಿಯನ್ನು ಮಾಡಬೇಕು ಅನ್ನುವ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹೊಸ ಕಾನೂನು ತರುವುದಕ್ಕೆ ಮುಂದಾಗಿದ್ದಾರೆ. ಪತ್ರಕರ್ತರಿಗೆ ಬೆದರಿಕೆ ಹಾಕುವಂತಹ ಕಿಡಿಗೇಡಿಗಳಿಗೆ 50,000 ರೂ. ವರೆಗೆ ದಂಡ ಹಾಗೂ 3 ವರ್ಷದವರೆಗೆ ಕಠಿಣ ಜೈಲು ಶಿಕ್ಷೆಯನ್ನು ವಿಧಿಸುವಂತಹ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.
ಈಗ ಯಾರಾದರೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದರೆ ಜೈಲಿಗೆ ಹೋಗಬೇಕಾಗಬಹುದು. ಅಲಹಾಬಾದ್ ಹೈಕೋರ್ಟ್ ಹೇಳಿಕೆಯ ನಂತರ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ನಾಡಿನ ಪತ್ರಕರ್ತರೊಂದಿಗೆ ಅಸಭ್ಯವಾಗಿ ವರ್ತಿಸುವ ಅಥವಾ ಬೆದರಿಕೆ ಹಾಕಲು ಪ್ರಯತ್ನಿಸುವವರಿಗೆ 50 ರೂಪಾಯಿ ದಂಡ ವಿಧಿಸಲಾಗುವುದು ಎಂದು ಘೋಷಿಸಿದ್ದಾರೆ. 50000 ವರೆಗೆ ದಂಡ ವಿಧಿಸಬಹುದು. ಇದಲ್ಲದೇ ಅವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು, ಬೆದರಿಕೆ ಆರೋಪದ ಮೇಲೆ ಬಂಧಿತ ರಾದವರಿಗೆ ಸುಲಭವಾಗಿ ಜಾಮೀನು ಸಿಗುವುದಿಲ್ಲ ಎಂದು ಯೋಗಿ ಹೇಳಿದ್ದಾರೆ. ಆದ್ದರಿಂದ ಪತ್ರಕರ್ತರ ಜೊತೆ ಯಾವುದೇ ರೀತಿಯ ಅಸಭ್ಯ ವರ್ತನೆ ಮಾಡಬೇಡಿ ಮತ್ತು ಪತ್ರಕರ್ತರಿಗೆ ಗೌರವ ಕೊಡುವ ಕೆಲಸ ಮಾಡಬೇಕು. ಇತ್ತೀಚಿಗೆ ಮಹಾರಾಷ್ಟ್ರದಲ್ಲಿ ಮಾಧ್ಯಮದವರ ಮೇಲೆ ಯಾವುದೇ ರೀತಿಯ ಹಿಂಸಾಚಾರ ಅಥವಾ ಮಾಧ್ಯಮದವರ ಮತ್ತು ಮಾಧ್ಯಮ ಸಂಸ್ಥೆಗಳ ಆಸ್ತಿಪಾಸ್ತಿಗಳಿಗೆ ಹಾನಿಯಾದ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಯಾವುದೇ ಪತ್ರಕರ್ತರಿಗೆ ಯಾವುದೇ ರೀತಿಯ ಸಮಸ್ಯೆ ಎದುರಾದರೆ ಕೂಡಲೇ ಅವರನ್ನು ಸಂಪರ್ಕಿಸಿ ನಿಮಗೆ ಬೆದರಿಕೆ ಹಾಕುವವರನ್ನು 24 ಗಂಟೆಯೊಳಗೆ ಜೈಲಿಗೆ ಕಳುಹಿಸಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪತ್ರಕರ್ತರೊಂದಿಗೆ ಗೌರವಯುತವಾಗಿ ಮಾತನಾಡಿ, ಇದು ನಿಮಗೆ ದುಬಾರಿಯಾಗಬಹುದು ಎಂದು ಸಿಎಂ ಯೋಗಿ ಕಟ್ಟುನಿಟ್ಟಿನ ಧ್ವನಿಯಲ್ಲಿ ಖಡಕ್ ಆಗಿಯೇ ಹೇಳಿದರು.