ನ್ಯೂಸ್ ನಾಟೌಟ್: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಘಟನೆ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಮಧ್ಯೆ ನಾಗಮಂಗಲ ಗಲಾಟೆ ಹಿಂದೆ ಕೇರಳ ಮೂಲದವರ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಎಫ್ಐಆರ್ನಲ್ಲಿರುವ 74 ಆರೋಪಿಗಳ ಪೈಕಿ ಕೇರಳ ಮೂಲದ ಇಬ್ಬರ ಹೆಸರು ಇದೆ. ಎ44 ಯೂಸುಫ್, ಎ61 ನಾಸೀರ್ ಇಬ್ಬರೂ ಕೇರಳದ ಮಲಪ್ಪುರಂ ನಿವಾಸಿಗಳು. ಇವರು ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯರು ಎಂಬ ಮಾಹಿತಿ ಬಹಿರಂಗವಾಗಿದೆ.
ಯೂಸುಫ್ ಮತ್ತು ನಾಸೀರ್ ಕೆಲ ದಿನಗಳಿಂದ ನಾಗಮಂಗಲದಲ್ಲಿ ವಾಸವಿದ್ದರು. ಈ ಗಲಭೆ ಹಿಂದೆ ಇವರ ಕೈವಾಡವಿರುವ ಅನುಮಾನ ವ್ಯಕ್ತವಾಗಿದೆ. ಮೊದಲೇ ಸಂಚು ರೂಪಿಸಿ ನಾಗಮಂಗಲದಲ್ಲಿ ಗಲಾಟೆಗೆ ಪ್ಲ್ಯಾನ್ ಮಾಡಲಾಗಿತ್ತು ಎಂಬ ಶಂಕೆ ಮೂಡಿದೆ.
ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ನಾಗಮಂಗಲ ತಾಲೂಕು ಅಧ್ಯಕ್ಷ ಅಜೀತ್ ಪ್ರಸಾದ್ ಮಾತನಾಡಿ, ಯೂಸುಫ್ ಮತ್ತು ನಾಸೀರ್ ಇಬ್ಬರೂ ಪಿಎಫ್ಐ ಸದಸ್ಯರು. ನಾಗಮಂಗಲದಲ್ಲಿ ಗಲಭೆ ನಡೆಸಲು ಪೂರ್ವ ತಯಾರಿ ನಡೆದಿದೆ. ಗಲಾಟೆ ನಡೆದ ದಿನ ಮೆಡಿಕಲ್ ಅಂಗಡಿಯಲ್ಲಿ 200 ಮಾಸ್ಕ್ ಖರೀದಿಸಲಾಗಿದೆ. ಪೆಟ್ರೋಲ್ ಬಾಂಬ್ ಬಳಕೆಯಲ್ಲೂ ಕೇರಳ ಮುಸ್ಲಿಮರ ಕೈವಾಡ ಇದೆ. ಗಲಭೆ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಆಗ್ರಹಿಸಿದ್ದಾರೆ.
Click