ನ್ಯೂಸ್ ನಾಟೌಟ್: ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ (Rural Drinking Water and Sanitation Department -RDWSD) ಖಾಲಿ ಇರುವ 47 ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಉದ್ಯೋಗ ವಿವರಗಳು ಇಲಾಖೆ ಹೆಸರು: ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ – Karnataka State RDWSD, ಒಟ್ಟು ಹುದ್ದೆಗಳು: 47, ಇದಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ ಮಾಹಿತಿ ಒದಗಿಸಲಾಗಿದೆ. ಉದ್ಯೋಗದ ಸ್ಥಳ -ಕರ್ನಾಟಕ. ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಆಯ್ಕೆ ವಿಧಾನ: ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಸಂಗ್ರಹಣೆ ಸಲಹೆಗಾರ – 9 ಹುದ್ದೆ, ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ -10 ಹುದ್ದೆ, ಪರಿಸರ ಸಲಹೆಗಾರ -10 ಹುದ್ದೆ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ -7 ಹುದ್ದೆ, ಹಣಕಾಸು ಸಲಹೆಗಾರ -11ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, BCA, BE ಅಥವಾ B.Tech, M.Tech, MCA, MSW, MA, MBA, M.Com ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಆದ್ಯತೆ ಇರುತ್ತದೆ.
ವೇತನ ಶ್ರೇಣಿ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 75,000/- ರಿಂದ 1,50,000/- ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ-12 ಸೆಪ್ಟೆಂಬರ್ 2024, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -23 ಅಕ್ಟೋಬರ್ 2024 ಎನ್ನಲಾಗಿದೆ.
Click