ನ್ಯೂಸ್ ನಾಟೌಟ್ : ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಹಿಂದಿ ಸಂಘದ ವತಿಯಿಂದ ಹಿಂದಿ ದಿನವನ್ನು ಶನಿವಾರ (ಸೆ.14) ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ರುದ್ರಕುಮಾರ್ ಎಂ.ಎಂ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ದೇಶದಲ್ಲಿ ಹಿಂದಿ ಭಾಷೆಯ ಮಹತ್ವ, ಅವಕಾಶಗಳು ಮತ್ತು ವಾಸ್ತವ ಸ್ಥಿತಿಗತಿಗಳ ಬಗ್ಗೆ ಮಾತನಾಡಿದರು.
ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಮಮ್ತಾ ಅವರು ಹಿಂದಿ ದಿನಾಚರಣೆ ಕುರಿತು ಮಾತನಾಡಿದರು. ಈ ಕಾರ್ಯಕ್ರಮದ ಮುಂಚಿತವಾಗಿ ಆಸಕ್ತ ವಿದ್ಯಾರ್ಥಿಗಳಿಗೆ ಹಿಂದಿ ಭಾಷೆಯಲ್ಲಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ದ್ವಿತೀಯ ಬಿಎಸ್ಸಿಯ ಸೌಮ್ಯ ಮತ್ತು ತಂಡ ಪ್ರಾರ್ಥಿಸಿ, ಜೀಷ್ಮ ಸ್ವಾಗತಿಸಿ, ದ್ವಿತೀಯ ಬಿಕಾಂನ ಪ್ರಿಯ ವಂದಿಸಿದರು. ತಸ್ಲೀಮಾ ಕಾರ್ಯಕ್ರಮ ನಿರೂಪಿಸಿದರು.