ನ್ಯೂಸ್ ನಾಟೌಟ್: ಎಲ್ಲಾ ಭಾಷೆಗಳು ಸಮಾನವಾದುದು. ನಾವು ಪ್ರತಿಯೊಂದು ಭಾಷೆಯನ್ನು ಗೌರವಿಸಬೇಕು. ವಿದ್ಯಾರ್ಥಿಗಳಲ್ಲಿ ಭಾಷೆಯನ್ನು ಕಲಿಯುವ ಆಸಕ್ತಿ ಇರಬೇಕು ಎಂದು ಸುಳ್ಯದ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಮಿಥಾಲಿ ಪಿ. ರೈ ಅಭಿಪ್ರಾಯಪಟ್ಟರು.
ಸುಳ್ಯದ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ (ಸೆ. 17) ಹಿಂದಿ ದಿವಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕಿ, ಹಿಂದಿ ಉಪನ್ಯಾಸಕಿ ರಾಜೇಶ್ವರಿ ಎ. ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅನನ್ಯ ಮತ್ತು ಬಳಗದವರು ಪ್ರಾರ್ಥಿಸಿ, ಶ್ರೇಯ ಸ್ವಾಗತಿಸಿದರು. ಉಪನ್ಯಾಸಕಿ ರಾಜೇಶ್ವರಿ ಎ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ಸುಗುಣ ಕಾರ್ಯಕ್ರಮ ನಿರೂಪಿಸಿ, ದಿಶನ್ ದೇವರಗುಂಡ ವಂದಿಸಿದರು.