ನ್ಯೂಸ್ ನಾಟೌಟ್: ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನದ ಪ್ರಸಾದದಲ್ಲಿ (ಲಡ್ಡು) ಮೀನು ಎಣ್ಣೆ ಮತ್ತು ಜಾನುವಾರು ಕೊಬ್ಬು ಬಳಕೆ ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಇದೊಂದು ಗಂಭೀರ ಪ್ರಕರಣವಾಗಿದೆ. ಹಿಂದೂ ಸಮಾಜವನ್ನು ಚಿಂತೆಗೀಡು ಮಾಡಿದೆ ಎಂದು ಕೇಂದ್ರ ಬಿಜೆಪಿ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ.
ತಿರುಮಲ ತಿರುಪತಿ ಹಿಂದುಗಳ ಪವಿತ್ರ ಕ್ಷೇತ್ರವಾಗಿದೆ. ಇಲ್ಲಿ ಸಿಗುವ ಲಡ್ಡು ಪ್ರಸಾದಗಳಿಗೆ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸುತ್ತಿರುವ ಆರೋಪ ಕೇಳಿ ಬಂದಿದೆ. ಇದನ್ನು ಆಂಧ್ರ ಸರ್ಕಾರ ತುಂಬಾ ಗಂಭೀರವಾಗಿ ಪರಿಗಣಿಸಬೇಕು. ತನಿಖೆಯ ಮೂಲಕ ಸತ್ಯಾಸತ್ಯತೆ ಜನಕ್ಕೆ ತಿಳಿಸಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು.
ತಿರುಮಲ ತಿರುಪತಿಯ ಟ್ರಸ್ಟ್ ನಲ್ಲಿ ಹಿಂದೂಯೇತರರನ್ನು ಟ್ರಸ್ಟ್ ಸದಸ್ಯರನ್ನಾಗಿ ನೇಮಕ ಮಾಡಿದ್ದರು. ಈ ರೀತಿಯ ವಿಚಾರಗಳು ಮತ್ತೆ ಮರುಕಳಿಸದಂತೆ ನೂತನ ಆಂಧ್ರ ಸರ್ಕಾರ ಎಚ್ಚರ ವಹಿಸಬೇಕು.
ಇನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರವು ಎಲ್ಲಾ ಪವಿತ್ರ ಕ್ಷೇತ್ರಗಳ ಪ್ರಸಾದಗಳನ್ನು ತ್ವರಿತವಾಗಿ ಪರೀಕ್ಷೆಗೆ ಒಳಪಡಿಸಬೇಕು. ಅದರ ವರದಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಬೇಕು. ಹಿಂದೂ ಧಾರ್ಮಿಕ ಟ್ರಸ್ಟ್ ಗಳಲ್ಲಿ ಹಿಂದೂಯೇತರರನ್ನು ನೇಮಕ ಮಾಡಬಾರದೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.