ನ್ಯೂಸ್ ನಾಟೌಟ್: ತಿರುಪತಿ ದೇವಳದ ಲಡ್ಡು ಪ್ರಸಾದದಲ್ಲಿ ಹಂದಿ ಮತ್ತು ದನದ ಕೊಬ್ಬಿನ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಿಗೆ ಹೊಸ ಆದೇಶ ಹೊರಡಿಸಲಾಗಿದೆ.
ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಶುದ್ಧ ನಂದಿನಿ ತುಪ್ಪ (Nandini ghee) ಬಳಸಬೇಕು. ಇತರ ಯಾವುದೇ ತುಪ್ಪ ಬಳಸದಂತೆ ಆದೇಶ ಹೊರಡಿಸಲಾಗಿದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಇದು ಅನ್ವಯವಾಗಲಿದೆ. ದೇವಸ್ಥಾನ ದೀಪಗಳಿಗೆ, ಪ್ರಸಾದ ತಯಾರಿಕೆ, ದಾಸೋಹ ಭವನದಲ್ಲಿ ನಂದಿನಿ ತುಪ್ಪ ಬಳಸಬೇಕು ಎಂದು ಸೂಚನೆ ನೀಡಲಾಗಿದೆ. ಅಲ್ಲದೇ ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದ ಗುಣಮಟ್ಟ ಕಾಪಾಡಬೇಕು, ಯಾವುದೇ ರೀತಿಯ ಲೋಪವಾಗದಂತೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.