ನ್ಯೂಸ್ ನಾಟೌಟ್ : ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನವರಲ್ಲೇ ಹೃದಯಾಘಾತದಂತಹ ಮಾರಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸರ್ಕಾರಿ ಶಾಲೆಯ 8ನೇ ತರಗತಿ ಬಾಲಕನೋರ್ವ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.
ಈ ದುರ್ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್ ಎಂಬ ಬಾಲಕನಿಗೆ ನಿನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿತ್ತು. ಎದೆ ನೋವಿನಿಂದ ಶಾಲೆಗೆ ಹೋಗದೆ ಮನೆಯಲ್ಲೇ ಇದ್ದ. ಮನೆಯಲ್ಲಿರುವಾಗ ಏಕಾಏಕಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.
ಮಲಗಿದ್ದ ಮಗನನ್ನು ಮಾತನಾಡಿಸಲು ತಾಯಿ ಕಾವ್ಯಶ್ರೀ ಮುಂದಾದಾಗ ಮಗ ಮಾತನಾಡಿಲ್ಲ. ಎಚ್ಚರವೂ ಆಗಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ತಕ್ಷಣವೇ ಆಲೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಮೃತಪಟ್ಟಿರುವುದನ್ನು ದೃಢ ಪಡಿಸಿದ್ದಾರೆ.