ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಶನಿವಾರ (ಸೆ.21) ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಕೌಮಾರಭೃತ್ಯ ಹಾಗೂ ಸ್ವಸ್ಥವೃತ್ತ ವಿಭಾಗದ ಸಹಯೋಗದೊಂದಿಗೆ ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇತೃತ್ವದ 7ನೇ ರಾಷ್ಟ್ರೀಯ ಪೋಷಣ್ ಮಾಹದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ. ದೀಪ ಬೆಳಗಿಸಿ ಉದ್ಘಾಟಿಸಿದರು. ಸ್ವಸ್ಥವೃತ್ತ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಶಭೀನಾ ಟಿ.ಟಿ. ಸರಿಯಾದ ಪೋಷಣೆಯ ಮಹತ್ವ ಹಾಗೂ ಆಯುರ್ವೇದದಲ್ಲಿ ತಿಳಿಸಿರುವ ಮಕ್ಕಳ ಹಾಗೂ ಸ್ತ್ರೀ ಪೋಷಣೆಯ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಚಿನ್ಮಯಿ, ಮೌಲ್ಯ ಪ್ರಾರ್ಥಿಸಿ, ವಿನಾಯಕ್ ಸ್ವಾಗತಿಸಿ, ಚೇತನ ವಂದಿಸಿದರು. ಅನನ್ಯ ಹಾಗೂ ಸ್ವಾತಿ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಎಂ, ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿ ಡಾ. ಪ್ರಮೋದ ಪಿ.ಎ., ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಪದವಿ ವಿದ್ಯಾರ್ಥಿಗಳು ಹಾಗೂ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.