ನ್ಯೂಸ್ ನಾಟೌಟ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್ ಸಿ-2 ಪೋಕೊÕ ವಿಶೇಷ ನ್ಯಾಯಾಲಯದ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳ್ತಂಗಡಿ ಸವಣಾಲು ಗ್ರಾಮದ ಸದಾಶಿವ (31) ಶಿಕ್ಷೆಗೊಳಗಾದವನು.
ಬಾಲಕಿಯ ತಾಯಿಯ ಮೊಬೈಲ್ಗೆ ಕರೆ ಮಾಡಿ ಬಾಲಕಿಯೊಂದಿಗೆ ಮಾತನಾಡುತ್ತಿದ್ದ ಆರೋಪಿ ಬಳಿಕ ಫೇಸ್ಬುಕ್ನಲ್ಲಿ ಸಂಪರ್ಕವನ್ನಿಟ್ಟುಕೊಂಡಿದ್ದ. 2022ರ ಆ. 9ರಂದು ಬೆಳಗ್ಗೆ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಂದು ಅತ್ಯಾಚಾರವೆಸಗಿದ್ದ. ಅನಂತರ ಫೇಸ್ಬುಕ್ನಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ. ಮನನೊಂದ ಬಾಲಕಿ ಡೀಸೆಲ್ ಸೇವನೆ ಮಾಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ತನಿಖೆ ಪೂರ್ಣಗೊಳಿಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.