ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಿರುದ್ಧ ಅವಹೇಳನಕಾರಿಯಾಗಿ ವರದಿ ಪ್ರಕಟಿಸಿದ್ದ ಪತ್ರಿಕೆ ಹಾಗೂ ಅಸಂಬದ್ಧವಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ವ್ಯಕ್ತಿಗಳ ವಿರುದ್ಧ ನ್ಯಾಯಾಲಯವು ತುರ್ತು ನಿರ್ಬಂಧಕಾಜ್ಞೆ ಹೊರಡಿಸಿ ಆದೇಶಿಸಿದೆ.
ಬೆಂಗಳೂರು ನಗರ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಕರಣದ ಅರ್ಜಿಯನ್ನು ಸಲ್ಲಿಸಲಾಗಿತ್ತು. ನ್ಯಾಯಾಲಯ ಇದಕ್ಕೆ ತುರ್ತಾಗಿ ಸ್ಪಂದಿಸಿದ್ದು ಆದೇಶದ ಪ್ರತಿ ಸೋಮವಾರ ಲಭಿಸಲಿದೆ ಎಂದು ತಿಳಿದು ಬಂದಿದೆ. ಸದ್ಯ ನ್ಯಾಯಾಲಯದ ವೆಬ್ ಸೈಟ್ ನಲ್ಲಿ ಶುಕ್ರವಾರವೇ ಆದೇಶ ಪ್ರತಿ ಕಾಣಬಹುದಾಗಿದೆ ಎಂದು ವಕೀಲ ಶ್ಯಾಮ್ ಸುಂದರ್ ತಿಳಿಸಿದ್ದಾರೆ.