ನ್ಯೂಸ್ ನಾಟೌಟ್: ಶಿಕ್ಷಣ ಕ್ಷೇತ್ರದಲ್ಲಿನ ಮಹತ್ತರ ಸಾಧನೆಯನ್ನು ಗುರುತಿಸಿ ಮೈಸೂರು ವೈದ್ಯಕೀಯ ಕಾಲೇಜಿನಿಂದ ವಿಶಿಷ್ಟ ಸೇವಾ ಪುರಸ್ಕಾರಕ್ಕೆ ಭಾಜನರಾದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅವರನ್ನು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಗೌರವಿಸಲಾಯಿತು.
ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷ ಡಾ. ಶ್ರೀನಾಥ ಎಮ್. ಪಿ. ಸನ್ಮಾನಿಸಿ ಮಾತನಾಡಿ, ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳ ಮಹಾ ಪೋಷಕರಾದ ಡಾ| ಕೆ.ವಿ. ಚಿದಾನಂದ ಅವರನ್ನು ಗೌರವಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಸಮಾಜಕ್ಕೆ ಅವರಿಂದ ಇನ್ನೂ ಹೆಚ್ಚಿನ ಸೇವೆಗಳು ಲಭಿಸಲಿ ಎಂದು ಶುಭಹಾರೈಸಿದರು.
ವೇದಿಕೆಯಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ., ಕೇಂದ್ರ ಸಾಹಿತ್ಯ ಪರಿಷತ್ ಸದಸ್ಯ ಡಾ. ಮಾಧವ ಎಮ್ ಕೆ, ಹೋಬಳಿ ಘಟಕಗಳ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ, ಚಂದ್ರಾವತಿ ಬಡ್ಡಡ್ಕ, ಗೌರವ ಕಾರ್ಯದರ್ಶಿ ಚಂದ್ರಮತಿ ಕೆ, ಕೋಶಾಧಿಕಾರಿ ದಯಾನಂದ ಆಳ್ವ, ಜಿಲ್ಲಾ ಪ್ರತಿನಿಧಿ ಇವರು ಉಪಸ್ಥಿತರಿದ್ದರು. ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿ ಲತಾ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್ತು, ತಾಲೂಕು ಸಾಹಿತ್ಯ ಪರಿಷತ್ತು, ಹಾಗೂ ಹೋಬಳಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.