ನ್ಯೂಸ್ ನಾಟೌಟ್: ಪುತ್ತೂರು ಸಮೀಪದ ಮುರ ಎಂಬಲ್ಲಿ ಆ್ಯಂಬುಲೆನ್ಸ್ ಮತ್ತು ಪಿಕಪ್ ನಡುವೆ ಅಪಘಾತ ಸಂಭವಿಸಿ ಆ್ಯಂಬುಲೆನ್ಸ್ ನಲ್ಲಿದ್ದ ಪುಟ್ಟ ಮಗು ಗಾಯಗೊಂಡ ಘಟನೆ ಇದೀಗ ವರದಿಯಾಗಿದೆ.
ಸುಳ್ಯದ ಆಸ್ಪತ್ರೆಯಿಂದ ಪುಟ್ಟ ಮಗುವೊಂದನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕೊಂಡೊಯ್ಯಲಾಗುತ್ತಿತ್ತು. ಈ ಸಂದರ್ಭ ಎದುರಿನಿಂದ ಬರುತ್ತಿದ್ದ ಪಿಕಪ್ ವಾಹನ ಆ್ಯಂಬುಲೆನ್ಸ್ಗೆ ಡಿಕ್ಕಿಯಾಗಿದೆ. ಘಟನೆಯಿಂದ ಆ್ಯಂಬುಲೆನ್ಸ್ನಲ್ಲಿದ್ದ ಪುಟ್ಟ ಮಗು ಮತ್ತು ಚಾಲಕ ಗಾಯಗೊಂಡಿದ್ದಾರೆ. ತಕ್ಷಣ ಮಗುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ನೀಡಿ ಬದಲಿ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ಕಳುಹಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.