ನ್ಯೂಸ್ ನಾಟೌಟ್: ಅತ್ಯಾಚಾರ, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸವಾಲು ಎದುರಾಗಿದೆ.
ಶನಿವಾರ ಬೆಳ್ಳಂಬೆಳಗ್ಗೆ ಮುನಿರತ್ನ ಅವರ ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ವೈಯಾಲಿಕಾವಲ್ ನ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಫ್ಎಸ್ಎಲ್ ತಂಡದ ಜತೆಗೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.