ನ್ಯೂಸ್ ನಾಟೌಟ್: ನಟಿಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಸಿದ್ದಿಕ್ ಗೆ ಸುಪ್ರೀಂ ಕೋರ್ಟ್ ಇಂದು (ಸೋಮವಾರ) ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿದ್ದಿಕ್ ಅವರ ಮನವಿಯ ಕುರಿತು ಸುಪ್ರೀಂ ಕೋರ್ಟ್ ಕೇರಳ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಸಿದ್ದಿಕ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಎಂಟು ವರ್ಷಗಳ ನಂತರ 2024ರಲ್ಲಿ ದೂರು ದಾಖಲಿಸಿರುವುದನ್ನು ಕೋರ್ಟ್ ಗಮನಕ್ಕೆ ತಂದಿದ್ದಾರೆ.
ಇದೇ ವೇಳೆ, ನಟನ ವಿರುದ್ಧ ದೂರು ದಾಖಲಿಸಲು ವಿಳಂಬಕ್ಕೆ ಕಾರಣವೇನು ಎಂದು ಸಂತ್ರಸ್ತೆಯ ಪರ ವಾದ ಮಂಡಿಸಿದ ವಕೀಲೆ ವೃಂದಾ ಗ್ರೋವರ್ ಗೆ ಸುಪ್ರೀಂಕೋರ್ಟ್ ಗೆ ಪ್ರಶ್ನಿಸಿದೆ.
ಸೆ. 24 ರಂದು, ಅತ್ಯಾಚಾರ ಪ್ರಕರಣದಲ್ಲಿ ಸಿದ್ದೀಕ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು, ಆದರೆ ಈಗ ಸುಪ್ರಿಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಸಿದ್ದೀಕ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿತ್ತು.