ನ್ಯೂಸ್ ನಾಟೌಟ್: ಬಿಗ್ ಬಾಸ್ ಸ್ಪರ್ಧಿಯಾಗಿರುವ ವಕೀಲ ಜಗದೀಶ್ ಪಡೆದಿದ್ದ ಲಾಯರ್ ಲೈಸೆನ್ಸ್ ಅನ್ನು ದೆಹಲಿ ಬಾರ್ ಕೌನ್ಸಿಲ್ ರದ್ದುಗೊಳಿಸಿದೆ. ಫೇಕ್ ಮಾರ್ಕ್ಸ್ ಕಾರ್ಡ್ ಕೊಟ್ಟು ಪದವಿ ಹಾಗೂ ಎಲ್ಎಲ್ಬಿ ಪದವಿ ಮಾಡಿ ಬಾರ್ ಕೌನ್ಸಿಲ್ ಅನುಮತಿ ಪಡೆದಿದ್ದರು ಎಂಬ ವಿಚಾರ ಬಹಿರಂಗವಾಗಿದೆ ಎನ್ನಲಾಗಿದೆ.
ಲಾಯರ್ ಜಗದೀಶ್ ಪಿಯುಸಿಯನ್ನೇ ಓದದೇ ನಕಲಿ ಮಾರ್ಕ್ಸ್ ಕಾರ್ಡ್ ಸೃಷ್ಟಿಸಿ, ಡಿಗ್ರಿ ಮಾಡಿದ್ದಾರೆ. ಅಲ್ಲದೆ, ಪದವಿ ಮೇಲೆ ಎಲ್ಎಲ್ಬಿ ಮಾಡಿ, ಬೆಂಗಳೂರಿನ ಬದಲು ದೆಹಲಿಗೆ ಹೋಗಿ ದೆಹಲಿ ಬಾರ್ ಕೌನ್ಸಿಲ್ನಲ್ಲಿ ವಕೀಲಿಕೆ ಸನ್ನದು ಪಡೆದಿದ್ದಾರೆ.. ಹೀಗಾಗಿ ಅವರ ಬಾರ್ ಕೌನ್ಸಿಲ್ ಲೈಸೆನ್ಸ್ ರದ್ದತಿ ಕೋರಿ ಹಿಮಾಂಶು ಭಾಟಿ ಎನ್ನುವವರು ಕೌನ್ಸಿಲ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದನ್ನು ಪರಿಗಣಿಸಿದ ದೆಹಲಿ ಬಾರ್ ಕೌನ್ಸಿಲ್ ವಕೀಲ ಜಗದೀಶ್ ಅವರಿಗೆ ನೀಡದಲಾಗಿದ್ದ ಅನುಮತಿಯನ್ನು ತಾತ್ಕಾಲಿಕವಾಗಿ ತಡೆ ಹಿಡಿದಿತ್ತು ಎನ್ನಲಾಗಿದೆ.
ನಂತರ ಎಲ್ಲ ದಾಖಲಾತಿಗಳನ್ನು ಪರಿಶೀಲನೆ ಮಾಡಲಾಯಿತು. 2024ರ ಏಪ್ರಿಲ್ನಲ್ಲಿ ನಡೆದ ಬಾರ್ ಕೌನ್ಸಿಲ್ ಸಭೆಯಲ್ಲಿ ಕೆ.ಎನ್. ಜಗದೀಶ್ ಕುಮಾರ್ ಅವರು ಸಲ್ಲಿಕೆ ಮಾಡಿದ ಪಿಯುಸಿ ಅಂಕಪಟ್ಟಿ ನಕಲಿ ಎಂದು ತಿಳಿದು ಬಂದಿತ್ತು. ಹೀಗಾಗಿ ಕೆ.ಎನ್ ಜಗದೀಶ್ ಕುಮಾರ್ ಅವರ ವಕೀಲಿಕೆ ಸನ್ನದು ಅನ್ನು ರದ್ದುಗೊಳಿಸಲಾಗಿದೆ ಎಂದು ಅಧಿಸೂಚನೆ ಹೊರಡಿಸಿದೆ.
ಇದೀಗ ಮಾಜಿ ಬಿಗ್ ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ಈ ಕುರಿತ ದಾಖಲೆಗಳನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.. ಅಲ್ಲದೆ, “ʼBigg boss ಜಗದೀಶನ ಲಾ ಡಿಗ್ರಿ ಕ್ಯಾನ್ಸಲ್ ಆಗಿದೆ. ಆತನ 2nd PUC ಮಾರ್ಕ್ಸ್ ಕಾರ್ಡ್ ನಕಲಿ ಆಗಿರುವುದರಿಂದ, ನಂತರದ ಡಿಗ್ರಿಗಳು ಮಾನ್ಯವಲ್ಲದಿದ್ದುದರಿಂದ ಆತನ ಸನ್ನದ್ದು ವಾಪಾಸ್ ಕೊಡುವಂತೆ ಬಾರ್ ಕೌನ್ಸಿಲ್ ಆದೇಶ ನೀಡಿದೆ. Don’t call him lawyer shaeeb. It’s an insult to advocates.” ಎಂದು ಬರೆದುಕೊಂಡಿದ್ದಾರೆ.
Click