ನ್ಯೂಸ್ ನಾಟೌಟ್: ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಮಹಿಳೆ ಸ್ಥಳದಲ್ಲೇ ಒದ್ದಾಡಿ ಸಾವನ್ನಪ್ಪಿದ ಘಟನೆ ನಡೆದಿದೆ.
ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಚಿಕ್ಕನಹಳ್ಳಿ ಗ್ರಾಮದ ನಿವಾಸಿ 50 ವರ್ಷದ ಮಂಜಮ್ಮ ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಮನೆ ಬಳಿ ನಿಂತಿದ್ದಾಗ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ದುರ್ಘಟನೆ ನಡೆದಿದೆ. ಮಹಿಳೆಯನ್ನು ರಕ್ಷಿಸಲು ಅಲ್ಲಿದ್ದ ಕೆಲವರು ಯತ್ನಿಸಿದ್ದರೂ ಆದರೆ ಅವರಿಗೂ ಕರೆಂಟ್ ಹೊಡೆದಿದ್ದರಿಂದ ಅವರು ದೂರ ಸರಿದಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದ್ದು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.
Click