ನ್ಯೂಸ್ ನಾಟೌಟ್: ಕಳೆದೆರಡು ದಿನಗಳಿಂದ ಹೆಚ್ಚಿನ ಮಳೆ ಇರುವ ಕಾರಣ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಸಾಲು ಸಾಲು ಗುಡ್ಡ ಕುಸಿತವಾಗಿದೆ. ಮತ್ತೊಂದೆಡೆ ಮಳೆ ನೀರು ರಸ್ತೆಯ ಮೇಲೆ ನದಿಯಂತೆ ಹರಿಯುತ್ತಿದೆ.
ಚಾರ್ಮಾಡಿ ಘಾಟ್ನಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ತೀವ್ರ ಪರದಾಡುತ್ತಿದ್ದಾರೆ.
ಕೊಟ್ಟಿಗೆಹಾರ, ಬಾಳೂರು, ಬಣಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು (ಅಕ್ಟೋಬರ್ 09) ಸಂಜೆ ನಿರಂತರವಾಗಿ ಎಡಬಿಡದೇ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿ ಗುಡ್ಡ ಕುಸಿದಿದೆ. ಭಾರೀ ಮಳೆಯಿಂದಾಗಿ ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ.
Click