ಬೆಂಗಳೂರು: 2021–22ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಪ್ರಕಟವಾಗಲಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆ ನಂತರ https://karresults.nic.in/ ಮತ್ತು www.kseeb.kar.nic.in ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನದ ನಂತರ ಆಯಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ನೋಂದಾ ಯಿಸಿಕೊಂಡಿರುವ ಫೋನ್ ನಂಬರ್ ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ವರ್ಷ ಮಾರ್ಚ್ 28 ರಿಂದ ಏಪ್ರಿಲ್ 11ರವರೆಗೆ ನಡೆದ ಪರೀಕ್ಷೆಗೆ ರಾಜ್ಯದಾದ್ಯಂತ 8.73 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.