ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ ಅ. 15ರಂದು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ (ರಿ.) ಮಂಗಳೂರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಹಾಗೂ ಗ್ರಾಮ ಪಂಚಾಯತ್ ಬೆಳ್ಳಾರೆ, ಪೆರುವಾಜೆ, ಕೊಡಿಯಾಲಬೈಲ್, ಕಳಂಜ, ಜಾಲ್ಸೂರು, ಐವರ್ನಾಡು, ಕನಕಮಜಲು, ಸುಳ್ಯ ನಗರ ಹಾಗೂ ರೋಟರಿ ಕ್ಲಬ್, ಬೆಳ್ಲಾರೆ ಟೌನ್ ಇದರ ಸಹಯೋಗದೊಂದಿಗೆ ಶಿಬಿರ ಆಯೋಜಿಸಲಾಗಿತ್ತು.
ಶಿಬಿರದಲ್ಲಿ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ| ಕಿರಣ್ ಕುಮಾರ್ ಹಾಗೂ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನುರಿತ ವೈದ್ಯರಾದ ಡಾ| ಇಬ್ರಾಹಿಂ ಹಾಗೂ ಡಾ| ಶೃತಿ ಉಪಸ್ಥಿತರಿದ್ದರು. ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ ಮಾಡಲಾಯಿತು. ಅಲ್ಲದೇ ಅಗತ್ಯವಿದ್ದ ರೋಗಿಗಳಿಗೆ ಕಣ್ಣೆನ ಪೊರೆ ಶಸ್ತ್ರ ಚಿಕಿತ್ಸೆಯನ್ನು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಉಚಿತವಾಗಿ ಮಾಡಲು ಶಿಫಾರಸ್ಸು ಮಾಡಲಾಯಿತು.