ನ್ಯೂಸ್ ನಾಟೌಟ್: ಆಕೆಯ ತಂದೆ ಸಾಲದ ಬಡ್ಡಿ ಕೊಟ್ಟಿಲ್ಲ ಎಂಬ ಕಾರಣಕ್ಕೆ ದುಷ್ಕರ್ಮಿಗಳು 17 ವರ್ಷದ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ಎಸೆಗಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ಇಂದು (ಅ.20) ವರದಿಯಾಗಿದೆ.
ಹಾಡಹಗಲೇ 17 ವರ್ಷದ ಬಾಲಕಿ ಮೇಲೆ ದುರುಳನಿಂದ ಅತ್ಯಾಚಾರ ಮಾಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದ್ದು, ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಆರೋಪಿ ರವಿಕುಮಾರ್(39 ವರ್ಷ) ಎಂಬಾತನನ್ನು ಬಂಧಿಸಲಾಗಿದೆ.
ಯುವತಿಯ ತಂದೆ, ರವಿ ಕುಮಾರ್ ಎಂಬಾತನ ಬಳಿ 70 ಸಾವಿರ ರೂ. ಹಣ ಪಡೆದಿದ್ದರು. ಆದರೆ ಸಮಯಕ್ಕೆ ಅದನ್ನು ಹಿಂದುರುಗಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಸಾಕಷ್ಟು ಬಾರಿ ರವಿಕುಮಾರ್ ಸಂತ್ರಸ್ಥೆಯ ತಂದೆಯೊಂದಿಗೆ ಬಡ್ಡಿ ಮತ್ತು ಅಸಲು ಪಾವತಿಗಾಗಿ ಜಗಳ ಮಾಡಿದ್ದ. ಬಳಿಕ ಅವರು 30 ಸಾವಿರ ರೂ. ಸಾಲ ತೀರಿಸಿದ್ದರು. ಇನ್ನುಳಿದ 40 ಸಾವಿರ ರೂ. ಜೊತೆಗೆ ಬಡ್ಡಿ ಹಣ ನೀಡದಿದ್ದಕ್ಕೆ ರವಿಕುಮಾರ್ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.
ಇದೇ ವೇಳೆ ಆಗಾಗ ಮನೆ ಬಳಿ ಬಂದು ಬಡ್ಡಿ ಹಣಕ್ಕಾಗಿ ಸಂತ್ರಸ್ತೆ ಹಾಗೂ ಆಕೆಯ ತಂದೆಯನ್ನು ಪೀಡಿಸುತ್ತಿದ್ದ. ಈ ಹಿಂದೆ ಬಲವಂತವಾಗಿ ಸಂತ್ರಸ್ತೆಗೆ ಆರೋಪಿ ರವಿಕುಮಾರ್ ಕಿಸ್ ಕೂಡ ಕೊಟ್ಟಿದ್ದ ಎನ್ನಲಾಗಿದೆ. ಮಾತ್ರವಲ್ಲದೇ ಕಿಸ್ ಕೊಟ್ಟಿರುವುದನ್ನು ಫೋಟೋ ತೆಗೆದಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ. ಇದೀಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ.
Click