ನ್ಯೂಸ್ ನಾಟೌಟ್ : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯಲ್ಲಿ ಒಟ್ಟು 1500 ಸ್ಥಳೀಯ ಬ್ಯಾಂಕ್ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಸಂಸ್ಥೆಯ ಹೆಸರು : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಹುದ್ದೆಗಳ ಸಂಖ್ಯೆ: 1500, ಉದ್ಯೋಗ ಸ್ಥಳ: ಭಾರತದೆಲ್ಲೆಡೆ ಇರಲಿದ್ದು, ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಯೂನಿಯನ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು ಎಂದು ತಿಳಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 20 ರಿಂದ 30 ವರ್ಷಗಳ ಒಳಗಿರಬೇಕು. ಆಯ್ಕೆಯ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಸಂದರ್ಶನ, ಸ್ಥಳೀಯ ಭಾಷಾ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 24-ಅಕ್ಟೋಬರ್-2024, ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-ನವೆಂಬರ್-2024, ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 13-11-2024 ಆಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲ್ಲಿ ನೀಡಲಾದ https://www.unionbankofindia.co.in/english/recruitment.aspx ಅನ್ನು ಕ್ಲಿಕ್ ಮಾಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
Click