ನ್ಯೂಸ್ ನಾಟೌಟ್ : ಸಿಎಂ ಸಿದ್ದರಾಮಯ್ಯ ಮಗ ಮತ್ತು ಸೊಸೆ ಹೆಸರಿನಲ್ಲಿ ಪಬ್ ಮಾಡಿದ್ದಾರೆ. ಅದಕ್ಕೆಲ್ಲ ಸಚಿವ ಭೈರತಿ ಸುರೇಶ್ ಮಾಸ್ಟರ್ ಮೈಂಡ್. ಇವರ ಕ್ಷೇತ್ರದಲ್ಲೇ ಆ ಪಬ್ ಇದೆ ಎಂದು ಬಿಜೆಪಿ ಎಂಎಲ್ಸಿ ಹೆಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ನಾನು ಸಿಎಂ ಆಗಿದ್ದರೂ ಬಾಡಿಗೆ ಮನೆಯಲ್ಲಿದ್ದೇನೆ ಎಂದು ಸಿದ್ದರಾಮಯ್ಯ ನಿನ್ನೆ ವರುಣಾ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆಗೆ ಹೆಚ್.ವಿಶ್ವನಾಥ್ ಈ ಹೇಳಿಕೆ ನೀಡಿದ್ದಾರೆ.
‘ಸಿದ್ದರಾಮಯ್ಯ ನಾನು ಒಳ್ಳೆಯವನು ಅಂತ ಡಂಗೂರ ಸಾರುತ್ತಿದ್ದಾರೆ. ಸಿದ್ದರಾಮಯ್ಯ ಸಾಚಾತನದ ಬಗ್ಗೆ ಜನರಿಗೆ ಗೊತ್ತಾಗಿದೆ. ಸಚಿವ ಭೈರತಿ ಸುರೇಶ್ ಒಳಗೆ ಹಾಕಿದರೆ ಎಲ್ಲ ವಿಚಾರ ಹೊರಬರುತ್ತೆ’ ಎಂದು ವಾಗ್ದಾಳಿ ಮಾಡಿದ್ದಾರೆ.
‘ನಾನು ಕೂಡ ಮೂರು ಪಾರ್ಟಿಗಳಲ್ಲಿ ಗುರುತಿಸಿಕೊಂಡಿದ್ದೇನೆ. ಆದರೆ ನನ್ನ ತತ್ವ ಸಿದ್ಧಾಂತ ಬಿಟ್ಟಿಲ್ಲ, ಜಂಡಾ ಬಿಟ್ಟರೂ ಅಜೆಂಡಾ ಬಿಟ್ಟಿಲ್ಲ. ಇತ್ತೀಚೆಗೆ ಪಕ್ಷ ರಾಜಕಾರಣ ಬದಲು ವ್ಯಕ್ತಿ ರಾಜಕಾರಣ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಹಾಳು ಮಾಡುತ್ತಿದ್ದಾರೆ. ಅವರು ಏನು ಮಾಡುತ್ತಿದ್ದಾರೆ ಅನ್ನೋದು ಅರ್ಥವಾಗುತ್ತಿಲ್ಲ” ಎಂದು ಕಿಡಿಕಾರಿದ್ದಾರೆ.
ನಿನ್ನೆ ನಡೆದಿದ್ದು 500 ಕೋಟಿ ರೂ. ಶಿಲಾನ್ಯಾಸ ಕಾರ್ಯಕ್ರಮವೋ ಅಥವಾ ನಾನು ಸತ್ಯವಂತ ಅಂತಾ ಹೇಳಿಕೊಳ್ಳುವ ಕಾರ್ಯಕ್ರಮವೋ? ನೀವು ಎಷ್ಟೇ ಹೇಳಿದರೂ ಸಿದ್ದರಾಮಯ್ಯ ಭ್ರಷ್ಟ ಅಂತ ಜನ ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.
Click