ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೆಚ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿರುವ ಕೇಂದ್ರ ಸರ್ಕಾರ ಇದರ ನಡುವೆಯೇ ಗ್ಯಾಸ್ ಸಿಲಿಂಡರ್ ಮೇಲೆ ಕೂಡ ಘೋಷಣೆ ಮಾಡಿದೆ.
ಹೌದು.. ಶನಿವಾರ ಗ್ಯಾಸ್ ಸಿಲಿಂಡರ್ ಬೆಲೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಶನಿವಾರ ಮಹತ್ವದ ಘೋಷಣೆಗಳನ್ನು ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದರೆ, ಗ್ಯಾಸ್ ಸಿಲಿಂಡರ್ಗಳ ಮೇಲೆ ರೂ 200 ಸಬ್ಸಿಡಿಯನ್ನು ಸಹ ಘೋಷಿಸಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಈ ಸಬ್ಸಿಡಿ ಲಭ್ಯವಾಗಲಿದ್ದು, ಆದರೆ ಈ ಸಬ್ಸಿಡಿ ವಿಚಾರಕ್ಕೆ ಷರತ್ತು ಕೂಡ ಹಾಕಲಾಗಿದೆ. ಈ ಸಬ್ಸಿಡಿಯನ್ನು ವಾರ್ಷಿಕವಾಗಿ 12 ಸಿಲಿಂಡರ್ಗಳಿಗೆ ಮಾತ್ರ ನೀಡಲಾಗುವುದು ಎಂದು ವಿತ್ತ ಸಚಿವಾಲಯ ಮಾಹಿತಿ ನೀಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀಟರ್ಗೆ 8 ರೂ ಮತ್ತು ಡೀಸೆಲ್ ಗೆ 6 ರೂ ರಷ್ಟು ಕಡಿಮೆ ಮಾಡುತ್ತಿದ್ದೇವೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ದರ 9.5 ರೂ ಹಾಗೂ ಡೀಸೆಲ್ ದರ 7 ರೂ ಇಳಿಕೆಯಾಗಲಿದೆ. ಇದು ಸರ್ಕಾರಕ್ಕೆ ಸುಮಾರು1 ಲಕ್ಷ ಕೋಟಿ/ವರ್ಷದ ಆದಾಯದ ಪ್ರಭಾವವನ್ನು ಹೊಂದಿರುತ್ತದೆ. ಎಲ್ಲಾ ರಾಜ್ಯ ಸರ್ಕಾರಗಳಿಗೆ, ವಿಶೇಷವಾಗಿ ಕಳೆದ ಸುತ್ತಿನಲ್ಲಿ (ನವೆಂಬರ್ 2021) ಕಡಿತವನ್ನು ಮಾಡದ ರಾಜ್ಯಗಳಿಗೆ, ಇದೇ ರೀತಿಯ ಕಡಿತವನ್ನು ಜಾರಿಗೆ ತರಲು ಮತ್ತು ಸಾಮಾನ್ಯ ಜನರಿಗೆ ಪರಿಹಾರವನ್ನು ನೀಡಲು ನಾನು ಈ ಮೂಲಕ ಒತ್ತಾಯಿಸಲು ಬಯಸುತ್ತೇನೆ.