ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ (ಅ.25 ) 45 ವರ್ಷ ಮೇಲ್ಪಟ್ಟ ಮಹಿಳೆಯರ ಯೋಗಕ್ಷೇಮದಲ್ಲಿ ಆಯುರ್ವೇದದ ಪಾತ್ರ ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಲಾಯಿತು.
ಕಾರ್ಯಾಗಾರವನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಸೂತಿ ತಂತ್ರ ಹಾಗೂ ಸ್ತ್ರೀರೋಗ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಡಾ. ಅಶೋಕ್ ಕೆ. ನಡೆಸಿಕೊಟ್ಟರು. ಕಾರ್ಯಾಗಾರದಲ್ಲಿ ಕೆವಿಜಿ ಕಾನೂನು ಮಹಾವಿದ್ಯಾಲಯ ಸುಳ್ಯ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಸಿಬ್ಬಂದಿ ವರ್ಗದವರು, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಎನ್ಎಸ್ಎಸ್ ಯೋಜನಾಧಿಕಾರಿ ಡಾ. ಪ್ರಮೋದ್ ಪಿಎ, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾದ ಚಿತ್ಕಲ ಭಾರದ್ವಾಜ್ ಹಾಗೂ ಅಶ್ವಿನಿ ಪ್ರಾರ್ಥಿಸಿದರು. ಎಸ್ ಅಶ್ವಿನಿ ಹಾಗೂ ಲಕ್ಷ್ಮಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು.