ನ್ಯೂಸ್ ನಾಟೌಟ್: ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಾರ್ಷಿಕೋತ್ಸವ ಗುರುವಾರ (ಅ. 24) ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್(ರಿ.) ಸುಳ್ಯ ಇದರ ಉಪಾಧ್ಯಕ್ಷೆ ಶೋಭಾ ಚಿದಾನಂದ ವಹಿಸಿದ್ದರು. ಮುಖ್ಯ ಅತಿಥಿಯಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ. ಸಿ. ಓಬುಲ್ ರೆಡ್ಡಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ವೈದ್ಯಕೀಯ ಮೌಲ್ಯಗಳ ಬಗ್ಗೆ ತಿಳಿಸಿದರು.
ಈ ಸಂದರ್ಭ ಕಾಲೇಜಿನ ಮ್ಯಾಗಜಿನ್ ಬಿಡುಗಡೆಗೊಳಿಸಲಾಯಿತು. ಬಳಿಕ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಕಾಲೇಜಿನ 2024-25ನೇ ಸಾಲಿನ ವರದಿ ವಾಚಿಸಿದರು. ವೇದಿಕೆಯಲ್ಲಿ ಮೆಡಿಕಲ್ ಸುಪರಿಂಟೆಂಡೆಂಟ್ ಹಾಗೂ ಜನರಲ್ ಮೆಡಿಸಿನ್ ವಿಭಾಗದ ಪ್ರೊಫೆಸರ್ ಡಾ. ಸಿ. ರಾಮಚಂದ್ರ ಭಟ್, ಒಬಿಜಿ ವಿಭಾಗ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಗೀತ ದೊಪ್ಪ, ಎ.ಒ.ಎಲ್.ಇ(ರಿ.) ಜೊತೆ ಕಾರ್ಯದರ್ಶಿ ಹೇಮನಾಥ ಕುರುಂಜಿ, ಇ.ಎನ್.ಟಿ ವಿಭಾಗ ಮುಖ್ಯಸ್ಥರು ಹಾಗೂ ವಿದ್ಯಾರ್ಥಿ ಸಂಘದ ಮುಖ್ಯ ಸಲಹೆಗಾರರಾದ ಡಾ. ರವಿಶಂಕರ್ ಎಸ್, ಜನರಲ್ ಸರ್ಜರಿ ವಿಭಾಗದ ಸಹಪ್ರಾಧ್ಯಾಪಕ ಹಾಗೂ ಸಾಂಸ್ಕೃತಿಕ ಸಂಘದ ಸಂಯೋಜಕರಾದ ಡಾ. ರಂಜಿತ್ ಕೆ.ಬಿ, ವಿದ್ಯಾರ್ಥಿ ನಾಯಕ ಅರ್ಜುನ್ ಗಿರೀಶ್ ಮತ್ತು ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು. ಈ ವೇಳೆ ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಬಯೋಕೆಮೆಸ್ಟ್ರಿ, ಅನಸ್ತೇಶಿಯಾ ಮತ್ತು ಒಬಿಜಿ ವಿಭಾಗಗಳಿಗೆ ವರ್ಷದ ಅತ್ಯುತ್ತಮ ವಿಭಾಗಗಳೆಂದು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಶಮಾ ಪ್ರಾರ್ಥಿಸಿದರು, ಇಎನ್ಟಿ ವಿಭಾಗ ಮುಖ್ಯಸ್ಥ ಡಾ. ರವಿಶಂಕರ್ ಎಸ್ ಸ್ವಾಗತಿಸಿದರು, ಬಯೋಕೆಮೆಸ್ಟ್ರಿ ವಿಭಾಗದ ಸಹಪ್ರಾಧ್ಯಾಪಕಿ ಡಾ. ಶ್ರುತಿ ರೈ ಪಿ ಅತಿಥಿಗಳನ್ನು ಪರಿಚಯಿಸಿದರು. ಡಾ. ರಘುನಾರಾಯಣ ಹಾಗೂ ಹರ್ಷಿಣಿ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಚಿರಾಗ್ ಗೌಡ ವೈ.ಎಚ್ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಬೋಧಕ ವೃಂದ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ವೈವಿಧ್ಯ ನಡೆಯಿತು. ಕಾರ್ಯಕ್ರಮದಲ್ಲಿ ಬೋಧ-ಬೋಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.