ನ್ಯೂಸ್ ನಾಟೌಟ್ : ಪತಿಯೊಂದಿಗೆ ಜಗಳವಾಡಿ ಮನೆಯಿಂದ ತೆರಳಿದ್ದ ಪತ್ನಿ ರೈಲಿಗೆ (Train) ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದಿಂದ ವರದಿಯಾಗಿದೆ.ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕಮಲಾ (35) ಎಂದು ಗುರುತಿಸಲಾಗಿದೆ.
ಮೃತ ಮಹಿಳೆ, ಸೋಮವಾರ ರಾತ್ರಿ ಪತಿಯೊಂದಿಗೆ ಜಗಳವಾಡಿ ಮನೆಯಿಂದ ತೆರಳಿದ್ದರು ಎಂದು ಹೇಳಲಾಗಿದೆ. ಬಳಿಕ ತಾಳಗುಪ್ಪ – ಬೆಂಗಳೂರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.ಮೃತ ಕಮಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ನೌಕರಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಿನೋಬನಗರ ಹಾಗೂ ರೈಲ್ವೆ ಪೊಲೀಸರು ಭೇಟಿಯಾಗಿ ಪರಿಶೀಲನೆ ನಡೆಸಿದ್ದಾರೆ.