ನ್ಯೂಸ್ ನಾಟೌಟ್: ಭಾರತದ ಸ್ವತಂತ್ರ ವಿದೇಶಾಂಗ ನೀತಿಗಳ ಬಗ್ಗೆ ಇತ್ತೀಚೆಗೆ ಮುಕ್ತ ಕಂಠದಿಂದ ಶ್ಲಾಘಿಸಿದ್ದ ಪಾಕಿಸ್ತಾನ ಮಾಟ್ರೋಲ್, ಡೀಸೆಲ್ ಬೆಲೆ ಇಳಿಕೆ ಕುರಿತ ವರದಿಯೊಂದರ ತುಣುಕನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಪಾಕಿಸ್ತಾನ ಸರ್ಕಾರವನ್ನು ಟೀಕಿಸಿದ್ದಾರೆ. ‘ಕ್ವಾಡ್ ಸದಸ್ಯ ರಾಷ್ಟ್ರವಾದರೂ ಅಮೆರಿಕದ ಒತ್ತಡಕ್ಕೆ ಮಣಿಯದ ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಮೂಲಕ ಜನರಿಗೆ ನೆರವಾಗಿದೆ. ಸ್ವತಂತ್ರ ವಿದೇಶಾಂಗ ನೀತಿಯ ಮೂಲಕ ಇಂಥದ್ದೇ ಸಾಧನೆ ಮಾಡಬೇಕೆಂದು ನಮ್ಮ ಸರ್ಕಾರ ಉದ್ದೇಶಿಸಿತ್ತು’ ಎಂದು ಅವರು ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.