ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಂಗಳವಾರ (ಅ.29) ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಯೋಗದೊಂದಿಗೆ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಮಹತ್ವ ಹಾಗೂ ಜಾಗತಿಕ ಆರೋಗ್ಯಕ್ಕಾಗಿ ಆಯುರ್ವೇದ ಆವಿಷ್ಕಾರಗಳ ಕುರಿತು ಸಾರ್ವಜನಿಕರಿಗೆ, ಜನಸಾಮಾನ್ಯರಿಗೆ ಅರಿವು ಮೂಡಿಸಲು ಜಾಥ ಹಮ್ಮಿಕೊಳ್ಳಲಾಯಿತು.
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾದರ್ ಡಿ.ವಿ. ಜಾಥಕ್ಕೆ ಚಾಲನೆ ನೀಡಿದರು. ಜಾಥದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು, ನೆಹರೂ ಮೆಮೋರಿಯಲ್ ಕಾಲೇಜಿನ ಅಸೋಸಿಯೆಟ್ ಎನ್.ಸಿ.ಸಿ ಯೋಜನಾಧಿಕಾರಿ ಲೆಫ್ಟಿನೆಂಟ್ ಸೀತಾರಾಮ್ ಎಂ. ಡಿ., ನೆಹರು ಮೆಮೋರಿಯಲ್ ಕಾಲೇಜಿನ ಎನ್ ಸಿ ಸಿ ಘಟಕದ ವಿದ್ಯಾರ್ಥಿಗಳು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಎನ್ ಎಸ್ ಎಸ್ ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ., ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಸ್ನಾತಕೋತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.
9ನೆಯ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಅಂಗವಾಗಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಈ ಕಾರ್ಯಕ್ರಮವನ್ನು ಭಾರತ ಸರಕಾರದ ಆಯುಷ್ ಮಂತ್ರಾಲಯ ನೇರಪ್ರಸಾರ ಹಮ್ಮಿಕೊಂಡಿದ್ದು, ಕೇಂದ್ರ ಸರಕಾರದ ಸೂಚನೆಯಂತೆ ಈ ಕಾರ್ಯಕ್ರಮದ ನೇರ ಪ್ರಸಾರವನ್ನು ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅವಕಾಶ ಮಾಡಲಾಗಿತ್ತು. ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಸ್ನಾತಕೋತರ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.