ನ್ಯೂಸ್ ನಾಟೌಟ್: ಮಧ್ಯಪ್ರದೇಶದ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳು ನಿಗೂಢವಾಗಿ ಸಾವನ್ನಪ್ಪಿದ್ದು, ಉಳಿದ ಮೂರು ಆನೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವನ್ಯಜೀವಿ ಅಧಿಕಾರಿಗಳು ತಿಳಿಸಿದ್ದಾರೆ.
ಏಳು ಆನೆಗಳ ದಿಢೀರ್ ಸಾವಿಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಜಬಲ್ ಪುರದ ವನ್ಯಜೀವಿ ವಿಧಿವಿಜ್ಞಾನ ಪ್ರಯೋಗಾಲಯ ಮತ್ತು ಆರೋಗ್ಯ ಕೇಂದ್ರದಲ್ಲಿ ಏಳು ಆನೆಗಳ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.
ರೈತರು ತಮ್ಮ ಬೆಳೆಗಳಿಗೆ ಕೀಟ ನಾಶಕ ಸಿಂಪಡಿಸಿದ್ದು, ಆ ಬೆಳೆಯನ್ನು ತಿಂದ ಪರಿಣಾಮ ಆನೆಗಳು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಆನೆಗಳ ಸಾವಿಗೆ ಸಂಬಂಧಪಟ್ಟಂತೆ ದೆಹಲಿ ಮೂಲದ ವನ್ಯಜೀವಿ ಅಪರಾಧ ನಿಯಂತ್ರಣ ದಳ ತನಿಖೆ ನಡೆಸಲು ಸಮಿತಿಯನ್ನು ರಚಿಸಿದ್ದು, ಅದರ ಜೊತೆಗೆ ರಾಜ್ಯ ಸರ್ಕಾರ ಕೂಡಾ ತನಿಖೆಗೆ ಆದೇಶ ನೀಡಿದೆ.
Click