ನ್ಯೂಸ್ ನಾಟೌಟ್: ಶಾಲೆಗೆ ಹೋಗುವ ಮಕ್ಕಳ ಕೈಗೆ ಮೊಬೈಲ್ ಕೊಡಬೇಡಿ ಎಂದು ಹತ್ತು ಹಲವು ಸಲ ಬೊಬ್ಬೆ ಹಾಕಿದರೂ ಏನೂ ಪ್ರಯೋಜನ ಆಗುತ್ತಿಲ್ಲ. ಅವರು ಮೊಬೈಲ್ ನಲ್ಲಿ ಏನು ಚಟುವಟಿಕೆ ಮಾಡುತ್ತಿದ್ದಾರೆ ಅನ್ನುವುದೇ ಗೊತ್ತಾಗುವುದಿಲ್ಲ. ಇದಕ್ಕೆ ಸಾಕ್ಷಿ ಎಂಬತೆ ಸುಳ್ಯದ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಎಲಿಮಲೆಯ ಹತ್ತನೇ ತರಗತಿ ಅಪ್ರಾಪ್ತ ಹಿಂದೂ ಹುಡುಗಿ ಜೊತೆ ಮೊಬೈಲ್ ನಲ್ಲಿ ಚಾಟ್ ಮಾಡಿ ಸಿಕ್ಕಿಬಿದ್ದಿದ್ದಾನೆ.
ಈ ಚಾಟ್ ಕೆಲವರ ಗಮನಕ್ಕೆ ಬಂದಿದೆ. ಇದರಿಂದ ಪಿತ್ತ ನೆತ್ತಿಗೇರಿಸಿಕೊಂಡ ಕೆಲವು ಯುವಕರು ಆತನನ್ನು ನಿನ್ನೆ ರಾತ್ರಿ ಕರೆದು ವಿಚಾರಿಸಿದ್ದಾರೆ. ಆತ ನಾನವನಲ್ಲ ಎಂದು ಹೇಳಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಈ ವೇಳೆ ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೆಟ್ಟು ತಿಂದ ಯುವಕ ಇದೀಗ ಸುಳ್ಯದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.