ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ವಾಣಿಜ್ಯಶಾಸ್ತ್ರ ಸಂಘದ ವತಿಯಿಂದ ರಾಷ್ಟ್ರೀಯ ಕಾನೂನು ಸೇವೆಗಳ ದಿನವನ್ನು ಶನಿವಾರ (ನ.9ರಂದು) ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ| ರುದ್ರಕುಮಾರ್ ಎಂ.ಎಂ. ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ವಕೀಲ ಪಿ. ಭಾಸ್ಕರ ರಾವ್ ಆಗಮಿಸಿ ರಾಷ್ಟ್ರೀಯ ಕಾನೂನು ಸೇವೆಗಳ ಬಗ್ಗೆ ವಿವರಿಸಿದರು. ಜೊತೆಗೆ ವಿದ್ಯಾರ್ಥಿಗಳಿಗೆ ಶೋಷಣೆ ತಪ್ಪಿಸುವಲ್ಲಿ ಕಾನೂನಿನ ಅರಿವಿನ ಅಗತ್ಯ. ಮೋಟಾರ್ ವೆಹಿಕಲ್ ಆಕ್ಟ್, ಪೋಕ್ಸೋ ಕಾಯಿದೆ ಹಾಗೂ ಹಲವಾರು ಕಾನೂನಿನ ಕುರಿತಾದ ವಿಚಾರಗಳನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು. ಮುಖ್ಯ ಅತಿಥಿಗಳಾಗಿ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಚಾಲಕಿ ಡಾ| ಮಮತಾ ಕೆ, ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ದಿವ್ಯಾ ಟಿ.ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಚೈತನ್ಯ ಎಂ ಸ್ವಾಗತಿಸಿದರು, ಲಹರಿ ಕೆ. ವಂದಿಸಿದರು, ಅನ್ವಯ ಬಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ಉಪನ್ಯಾಸಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೋಧಕೇತರ ವೃಂದ ಉಪಸ್ಥಿತರಿದ್ದರು.