ನ್ಯೂಸ್ ನಾಟೌಟ್ : ಇಲ್ಲೋರ್ವ ವ್ಯಕ್ತಿ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆದು ಪ್ರದಕ್ಷಿಣೆ ಹಾಕುವ ವೇಳೆ ಹೃದಯಾಘಾತಗೊಂಡು ಮೃತಪಟ್ಟಿರುವ ಘಟನೆ ಹೈದರಾಬಾದ್ ನ ಕೆ.ಪಿ.ಎಚ್.ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ(ನ.11) ನಡೆದಿದೆ.
ಆಂದ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕದಿರಿ ಮಂಡಲದ ಕೆ.ವಿಷ್ಣುವರ್ಧನ್ (31) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಈತ ಹೈದರಾಬಾದ್ ನ KPHB ಕಾಲೋನಿಯಲ್ಲಿರುವ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದು ಇಲ್ಲಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ವಿಷ್ಣುವರ್ಧನ್ ದಿನಂಪ್ರತಿ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುತ್ತಿದ್ದ ಎನ್ನಲಾಗಿದೆ. ಅದರಂತೆ ಸೋಮವಾರ(ನ.11) ಬೆಳಿಗ್ಗೆ ಸುಮಾರು 8.30 ಗಂಟೆಯ ಸುಮಾರಿಗೆ ಕಾಲೋನಿ ಬಳಿ ಇರುವ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆದು ಪ್ರದಕ್ಷಿಣೆ ಹಾಕುವ ವೇಳೆ ಇದ್ದಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ ಈ ವೇಳೆ ವಿಷ್ಣುವರ್ಧನ್ ಕಂಬ ಹಿಡಿದುಕೊಂಡಿದ್ದಾರೆ. ಬಳಿಕ ಒಮ್ಮೆಲೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅಲ್ಲಿದ್ದ ಇತರರು ವಿಷ್ಣುವರ್ಧನ್ ಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ವಿಷ್ಣುವರ್ಧನ್ ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ.
ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ವಿಷುವರ್ಧನ್ ಕುಸಿದು ಬೀಳುವ ದೃಶ್ಯ ಸೆರೆಯಾಗಿದೆ.
Click